ಆ್ಯಪ್ನಗರ

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನ ಪೋಸ್ಟ್‌ ಆರೋಪ

ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಫೋಸ್ಟ್‌ ಮಾಡಿದ ಆರೋಪದ ಮೇಲೆ ಮಹೇಶ್‌ ವಿಕ್ರಂ ಹೆಗ್ಡೆ ಎಂಬುವರ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka 1 Dec 2018, 5:00 am
ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಫೋಸ್ಟ್‌ ಮಾಡಿದ ಆರೋಪದ ಮೇಲೆ ಮಹೇಶ್‌ ವಿಕ್ರಂ ಹೆಗ್ಡೆ ಎಂಬುವರ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web case against vikram hegde
ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನ ಪೋಸ್ಟ್‌ ಆರೋಪ


ಈ ಸಂಬಂಧ ಕೆಪಿಸಿಸಿ ಕಾರ್ಯದರ್ಶಿ ಎ.ಎನ್‌.ನಟರಾಜು ಗೌಡ, ನ.29ರಂದು ದೂರು ನೀಡಿದ್ದಾರೆ. ಫೇಸ್‌ಬುಕ್‌ ಜಾಲತಾಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅಸಭ್ಯ ಕೀಳು ಅಭಿರುಚಿಯ ಚಿತ್ರಸಹಿತ ಬರಹ ಪ್ರಕಟಿಸಿ ಶೇರ್‌ ಮಾಡಿರುವ ಮಹೇಶ್‌ ವಿಕ್ರಂ ಹೆಗ್ಡೆ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿಬೇಕು ಎಂದು ದೂರಿನಲ್ಲಿ ಕೋರಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ, ಐಪಿಸಿ ಕಲಂ 153ಎ, 500 ಮತ್ತು 504 ಅಡಿ ಕೇಸ್‌ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ