ಆ್ಯಪ್ನಗರ

Weather Report: ಚಳಿಗೆ ಬೆಂಗಳೂರು ಗಡಗಡ- ಮಳೆ ಮುನ್ಸೂಚನೆ ನಡುವೆಯೇ ಹೆಚ್ಚಾದ ಚಳಿ

weather report: ಬೆಂಗಳೂರಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ನಿನ್ನೆ ಇಡೀ ದಿನ, ಮೋಡ ಕವಿದ ವಾತಾವರಣ ಇತ್ತು. ರಾತ್ರಿ ವೇಳೆ ತುಂತುರು ಮಳೆಯೂ ಆಗಿತ್ತು. ಇಂದು ಮುಂಜಾನೆ 16 ಡಿಗ್ರಿ ಸೆಲ್ಸಿಯಸ್ ಕನಿಷ್ಟ ತಾಪಮಾನ ದಾಖಲಾಗಿದೆ.

Authored byಸೌಮ್ಯಶ್ರೀ ಮಾರ್ನಾಡ್ | Vijaya Karnataka Web 9 Dec 2022, 10:19 am

ಹೈಲೈಟ್ಸ್‌:

  • ನಗರದ ಜನ ಕೊರೆಯುವ ಚಳಿಗೆ ತತ್ತರಿಸಿದ್ದಾರೆ.
  • ಇಂದು ಮುಂಜಾನೆ 16 ಡಿಗ್ರಿ ಸೆಲ್ಸಿಯಸ್ ಕನಿಷ್ಟ ತಾಪಮಾನ ದಾಖಲಾಗಿದೆ.
  • ನಾಳೆಯೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮುಂಜಾನೆ ಮಂಜು ಕವಿದ ವಾತಾವರಣ ಇರಲಿದೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web chilly weather
ಬೆಂಗಳೂರು: ನಗರದ ಜನ ಕೊರೆಯುವ ಚಳಿಗೆ ತತ್ತರಿಸಿದ್ದಾರೆ. ಹವಾಮಾನ ಇಲಾಖೆ ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ ನೀಡಿದ್ದು, ನಿನ್ನೆ ಇಡೀ ದಿನ, ಮೋಡ ಕವಿದ ವಾತಾವರಣ ಇತ್ತು. ರಾತ್ರಿ ವೇಳೆ ತುಂತುರು ಮಳೆಯೂ ಆಗಿತ್ತು. ಇಂದು ಮುಂಜಾನೆ 16 ಡಿಗ್ರಿ ಸೆಲ್ಸಿಯಸ್ ಕನಿಷ್ಟ ತಾಪಮಾನ ದಾಖಲಾಗಿದೆ.
ನಾಳೆಯೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮುಂಜಾನೆ ಮಂಜು ಕವಿದ ವಾತಾವರಣ ಇರಲಿದೆ, ಗರಿಷ್ಟ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Report: ಬೆಂಗಳೂರಲ್ಲಿ ಮುಂದುವರಿದ ತುಂತುರು ಮಳೆ; ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ
ನಿನ್ನೆ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 10.8 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.

ಒಂದೆರಡು ಕಡೆ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

Weather Forecast: ರಾಜ್ಯದಲ್ಲಿ 2 ದಿನ ಮಳೆ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ