ಆ್ಯಪ್ನಗರ

'ಪುಂಡಾಟಗಳನ್ನು ಸರ್ಕಾರ ಸಹಿಸಲ್ಲ, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ' : ಸಿಎಂ ಬಿಎಸ್‌ವೈ

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಿನ್ನೆ ರಾತ್ರಿಯೇ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಇದೀಗ ದಾಂಧಲೆಯನ್ನು ಹತ್ತಿಕ್ಕಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ನಿನ್ನೆ ರಾತ್ರೋರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್‌ವೈ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Vijaya Karnataka Web 12 Aug 2020, 9:11 am
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹಾಕಿರೋ ಒಂದು ಪೋಸ್ಟ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಉಂಟಾದ ಗಲಭೆಯಲ್ಲಿ ಈಗಾಗಲೇ ನೂರಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟರೆ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Vijaya Karnataka Web BSY


ಬೆಂಗಳೂರು ಗಲಭೆ: ಪ್ರಮುಖ ಆರೋಪಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯನ ಬಂಧನ

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಿನ್ನೆ ರಾತ್ರಿಯೇ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಇದೀಗ ದಾಂಧಲೆಯನ್ನು ಹತ್ತಿಕ್ಕಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ನಿನ್ನೆ ರಾತ್ರೋರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್‌ವೈ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಗಲಭೆ: ನಗರದಾದ್ಯಂತ ನಿಷೇಧಾಜ್ಞೆ ಜಾರಿ, ಡಿಜೆ ಹಳ್ಳಿ, ಕೆಜಿ ಹಳ್ಳಿ ವ್ಯಾಪ್ತಿಯ

ತಾವು ಮಾಡಿರುವ ಟ್ವೀಟ್‌ನಲ್ಲಿ ಸಿಎಂ ಬಿಎಸ್‌ವೈ, ‘ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ‌ ಮಾಡಿ ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು, ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.


ಪಾದರಾಯಪುರ ಗಲಭೆಯನ್ನೂ ಮೀರಿಸಿತು ಕೆಜಿ ಹಳ್ಳಿ, ಡಿಜಿ ಹಳ್ಳಿ ಮಧ್ಯರಾತ್ರಿ ಪುಂಡಾಟ..!

ಅಲ್ಲದೇ, ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಎಂದಿರುವ ಸಿಎಂ ಬಿಎಸ್‌ವೈ, ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ