ಆ್ಯಪ್ನಗರ

ಬೆಂಗಳೂರಲ್ಲಿ 57 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 57 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಇದು ವಿದ್ಯಾರ್ಥಿ ಸಮುದಾಯದಲ್ಲಿ ಆತಂಕ ಹೆಚ್ಚಿಸಿದೆ.

Vijaya Karnataka Web 20 Nov 2020, 12:16 am
ಬೆಂಗಳೂರು: ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 57 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಇದು ವಿದ್ಯಾರ್ಥಿ ಸಮುದಾಯದಲ್ಲಿ ಆತಂಕ ಹೆಚ್ಚಿಸಿದೆ.
Vijaya Karnataka Web Coronavirus


ಅಂತಿಮ ವರ್ಷದ ಪದವಿ ಕಾಲೇಜುಗಳ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯು ವಿದ್ಯಾರ್ಥಿಗಳನ್ನು ಕೋವಿಡ್‌ ಪರೀಕ್ಷೆಗೊಳಪಡಿಸುವ ಸಲುವಾಗಿಯೇ ಮೊಬೈಲ್‌ ತಂಡಗಳನ್ನು ನಿಯೋಜಿಸಿದೆ.

ಪಾಲಿಕೆಯಿಂದ ನಿಯೋಜಿಸಲ್ಪಟ್ಟ ಮೊಬೈಲ್‌ ತಂಡಗಳು ಕಾಲೇಜುಗಳ ಬಳಿಯೇ ತೆರಳಿ ವಿದ್ಯಾರ್ಥಿಗಳಿಗೆ ಕೋವಿಡ್‌ ಪತ್ತೆ ಪರೀಕ್ಷೆ ಮಾಡುತ್ತಿವೆ. ನಗರದ 343 ಕಾಲೇಜುಗಳಲ್ಲಿಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ 81911 ವಿದ್ಯಾರ್ಥಿಗಳನ್ನು ಗುರುತಿಸಿದ್ದು, ಈವರೆಗೆ 30,032 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ನಗರದ ನಾನಾ ಕಾಲೇಜುಗಳ ಬಳಿ ಪಾಲಿಕೆಯ 176 ಮೊಬೈಲ್‌ ತಂಡಗಳು ಗುರುವಾರ 10,807 ವಿದ್ಯಾರ್ಥಿಗಳನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿವೆ. ನ. 17ರಂದು 11574 ಮತ್ತು ನ. 18ರಂದು 7651 ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲಾಗಿದೆ.

ಮತ್ತೆ ನಿಧಾನವಾಗಿ ಹೆಚ್ಚುತ್ತಿದೆ ಕೊರೊನಾ ಅಬ್ಬರ‌..! ಬೆಂಗಳೂರಲ್ಲಿ ಮತ್ತೊಮ್ಮೆ ಸಾವಿರದ ಗಡಿ ದಾಟಿದ ಸೋಂಕು

ನಗರದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಗುರುವಾರ ಹೊಸದಾಗಿ 1048 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಕೊರೊನಾದಿಂದ ಬಳಲುತ್ತಿದ್ದ 14 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಜಿಲ್ಲೆವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಒಟ್ಟು 3,60,587 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ3,38,688 ಮಂದಿ ಸೋಂಕು ಮುಕ್ತರಾಗಿದ್ದಾರೆ. ಉಳಿದ 17,856 ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 297 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೋವಿಡ್‌ ಬಾಧಿತರ ಪೈಕಿ ಈವರೆಗೆ 4042 ಮಂದಿ ಸಾವಿಗೀಡಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ

  • * ಒಟ್ಟು ಸೋಂಕಿತ ಪ್ರಕರಣಗಳು 3,60,587
  • * ಗುಣಮುಖ 3,38,688
  • * ಸಕ್ರಿಯ 17,856
  • * ಮೃತಪಟ್ಟವರು 4042

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ