ಆ್ಯಪ್ನಗರ

ಕೊರೊನಾ ವಾರಿಯರ್‌ಗಳಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ಕೊಡಿ: ಸಿಎಂಗೆ ಡಿ.ಕೆ.ಶಿವಕುಮಾರ್ ಪತ್ರ

ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್‌ ಕಾರ್ಯಕರ್ತರಿಗೆ ಅವಕಾಶ ನೀಡಿ ಎಂದು ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು ಬಿಜೆಪಿ ಕಾರ್ಯಕರ್ತರಂತೆ ನಮಗೂ ಅವಕಾಶ ನೀಡಿ ಎಂದು ಕೇಳಿದ್ದಾರೆ.

Vijaya Karnataka Web 8 Jul 2020, 8:18 pm
ಬೆಂಗಳೂರು: ಕೊರೊನಾ ವೈರಸ್‌ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿದ್ದಾರೆ.
Vijaya Karnataka Web coronavirus outbreak kpcc president dk shivakumar write letter to cm give opportunity to congress supporters for serve people
ಕೊರೊನಾ ವಾರಿಯರ್‌ಗಳಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ಕೊಡಿ: ಸಿಎಂಗೆ ಡಿ.ಕೆ.ಶಿವಕುಮಾರ್ ಪತ್ರ


ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಕೊರೊನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು ಕೊರೊನಾ ವಾರಿಯರ್‌ಗಳಾಗಿ ಬಳಸಿಕೊಳ್ಳುವುದಾಗಿ ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಸಿಎಂಗೆ ಪತ್ರ ಬರೆದಿರುವ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ಹೇಳಿದ್ದಾರೆ.

ಸಿಎಂಗೆ ಬರೆದ ಪತ್ರದಲ್ಲಿ, ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಕೋವಿಡ್ ಸಂತ್ರಸ್ತರ ನೆರವಿಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಎಲ್ಲ ಜಿಲ್ಲಾ, ತಾಲೂಕು ಹಾಗೂ ಪಂಚಾಯಿತಿ ಮಟ್ಟದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು, ತನು ಮನ ಧನ ಸಹಾಯ ಮಾಡುತ್ತಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ವಾರ್ಡ್ ಮಟ್ಟದಲ್ಲಿ ಕೊರೊನಾ ಸೋಂಕಿತರ ಸೇವೆಗೆ ಬಿಜೆಪಿ ಸಿದ್ಧ: ಡಿಸಿಎಂ ಅಶ್ವತ್ಥ ನಾರಾಯಣ

ನಮ್ಮ ಪಕ್ಷದ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕೆಲಸ ಮಾಡಲು ಸದಾ ಸನ್ನದ್ಧರಾಗಿದ್ದು, ಜನಸೇವೆಗೆ ಲಭ್ಯರಿದ್ದಾರೆ. ಹೀಗಾಗಿ ಸರಕಾರ ಅಧಿಕೃತವಾಗಿ ನಮ್ಮ ಕಾರ್ಯಕರ್ತರಿಗೂ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸರಕಾರಕ್ಕೆ ಆಗ್ರಹಿಸಿದ್ದಾರೆ.

ನಿಯಂತ್ರಣದಲ್ಲಿ ಕೊರೊನಾ: ಬೆಂಗಳೂರು ಬಿಟ್ಟು ಹೋಗದಂತೆ ಅಶ್ವತ್ಥ ನಾರಾಯಣ ಮನವಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ