ಆ್ಯಪ್ನಗರ

ಬೆಂಗಳೂರು: ಕ್ಷೇತ್ರವಾರು ಕೋವಿಡ್‌ ಆರೈಕೆ ಕೇಂದ್ರ ಸ್ಥಾಪನೆಗೆ ಸೂಚನೆ

ನಗರದಲ್ಲಿ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹಾಗಾಗಿ, ಈ ಹಿಂದೆ ಸ್ಥಾಪಿಸಿದ್ದ ಕೋವಿಡ್‌ ಆರೈಕೆ ಕೇಂದ್ರಗಳ ಪೈಕಿ ವಿಧಾನಸಭಾ ಕ್ಷೇತ್ರವಾರು ಒಂದು ಕೇಂದ್ರವನ್ನು ಪುನರಾರಂಭಿಸಲು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಬೇಕು.

Vijaya Karnataka 4 Jan 2022, 11:22 pm
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ ಸೋಂಕಿತ ಪ್ರಕರಣಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿಯೂ ತಲಾ ಒಂದೊಂದು ಕೋವಿಡ್‌ ಆರೈಕೆ ಕೇಂದ್ರವನ್ನು ಆರಂಭಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web ಗೌರವ್‌ ಗುಪ್ತಾ
ಗೌರವ್‌ ಗುಪ್ತಾ


ಬೆಂಗಳೂರು ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯ ಕೆಂಪೇಗೌಡ ಸಮುದಾಯ ಭವನದಲ್ಲಿ ಸಿಎಸ್‌ಆರ್‌ ಅನುದಾನದಡಿ ಸ್ಥಾಪಿಸಿರುವ ಕೋವಿಡ್‌ ಆರೈಕೆ ಕೇಂದ್ರವನ್ನು ಮಂಗಳವಾರ ಪರಿಶೀಲಿಸಿ ಮಾತನಾಡಿದ ಅವರು, ''ನಗರದಲ್ಲಿ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹಾಗಾಗಿ, ಈ ಹಿಂದೆ ಸ್ಥಾಪಿಸಿದ್ದ ಕೋವಿಡ್‌ ಆರೈಕೆ ಕೇಂದ್ರಗಳ ಪೈಕಿ ವಿಧಾನಸಭಾ ಕ್ಷೇತ್ರವಾರು ಒಂದು ಕೇಂದ್ರವನ್ನು ಪುನರಾರಂಭಿಸಲು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಬೇಕು. ವಿಧಾನಸಭಾ ಕ್ಷೇತ್ರವಾರು ಗುರುತಿಸುವ ಆರೈಕೆ ಕೇಂದ್ರದ ಹೆಸರು, ವಿಳಾಸ, ಹಾಸಿಗೆಗಳ ಸಂಖ್ಯೆ, ಆಕ್ಸಿಜನ್‌ ಬೆಡ್‌ಗಳ ಸಂಖ್ಯೆ, ಲಭ್ಯವಿರುವ ಸಿಲಿಂಡರ್‌ಗಳು, ಆಕ್ಸಿಜನ್‌ ಕಾನ್ಸನ್ಟೆ್ರೕಟರ್‌ಗಳ ಮಾಹಿತಿಯನ್ನು ಕೂಡಲೇ ಕಲೆ ಹಾಕಬೇಕು'' ಎಂದು ಹೇಳಿದರು.

ರಾಜ್ಯದಲ್ಲಿ ವೀಕೆಂಡ್‌ ಕರ್ಫ್ಯೂ ಜಾರಿ, ನೈಟ್‌ ಕರ್ಫ್ಯೂ ವಿಸ್ತರಣೆ; ಇಲ್ಲಿದೆ ಮಾರ್ಗಸೂಚಿ ಪೂರ್ಣ ವಿವರ

ಸಚಿವ ಕೆ.ಗೋಪಾಲಯ್ಯ ಮಾತನಾಡಿ, ''ನಂದಿನಿ ಬಡಾವಣೆಯ ಕೆಂಪೇಗೌಡ ಸಮುದಾಯ ಭವನದಲ್ಲಿ ಈ ಹಿಂದೆಯೇ ಕೋವಿಡ್‌ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಈಗ ಸಿಎಸ್‌ಆರ್‌ ಅನುದಾನದಡಿ ಆಕ್ಸಿಜನ್‌ ಪ್ಲಾಂಟ್‌, ಒಂದನೇ ಮಹಡಿಯಲ್ಲಿ 18 ಆಕ್ಸಿಜನ್‌ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ವೈದ್ಯರು, ಸಿಬ್ಬಂದಿ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳನ್ನು ಮಾಡಿಕೊಂಡು ಸುಸಜ್ಜಿತ ಕೇಂದ್ರವನ್ನಾಗಿ ಮಾಡಲು ಕ್ರಮ ವಹಿಸಲಾಗುತ್ತಿದೆ'' ಎಂದು ತಿಳಿಸಿದರು.

''ಈ ಕೇಂದ್ರದ ನೆಲಮಹಡಿಯಲ್ಲಿ 45, ಮೊದಲ ಮಹಡಿಯಲ್ಲಿ18 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು 40 ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ಗಳು ಲಭ್ಯ ಇವೆ. ಕುಡಿಯುವ ನೀರು, ಶೌಚಾಲಯ ಸೌಲಭ್ಯವೂ ಇದೆ. ಒಂದನೇ ಮಹಡಿಗೆ ಲಿಫ್ಟ್‌ ವ್ಯವಸ್ಥೆ ಕಲ್ಪಿಸುವುದೂ ಸೇರಿದಂತೆ ಸಣ್ಣ-ಪುಟ್ಟ ಕೆಲಸಗಳು ಬಾಕಿ ಇದ್ದು, ಕೂಡಲೇ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ'' ಎಂದರು.

ಕರ್ನಾಟಕದಲ್ಲಿ ಒಂದೇ ದಿನ 2,479 ಕೊರೊನಾ ಕೇಸ್..! ಬೆಂಗಳೂರಲ್ಲೇ 2000+ ಇದೇನಾ ಕೋವಿಡ್ 3ನೇ ಅಲೆ..?

ಪಾಲಿಕೆಯ ವಿಶೇಷ ಆಯುಕ್ತ (ಆರೋಗ್ಯ) ಡಾ. ತ್ರಿಲೋಕ್‌ ಚಂದ್ರ, ವಲಯ ಜಂಟಿ ಆಯುಕ್ತ ಶಿವಸ್ವಾಮಿ, ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್‌, ನಿರ್ಮಲಾ ಬುಗ್ಗಿ, ವಲಯ ಆರೋಗ್ಯಾಧಿಕಾರಿ ಡಾ. ಮನೋರಂಜನ್‌ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ