ಆ್ಯಪ್ನಗರ

ಡಿಜೆ ಹಳ್ಳಿ ಗಲಭೆ ಪ್ರಕರಣ ಆರೋಪಿ, ಮಾಜಿ ಮೇಯರ್‌ ಸಂಪತ್‌ರಾಜ್‌ ಆಸ್ಪತ್ರೆಯಿಂದ ಪರಾರಿ

ಯಾವುದೇ ಮಾಹಿತಿಯನ್ನು ನೀಡದೆ ಸಂಪತ್‌ರಾಜ್‌ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿದೆ. ಈ ಕುರಿತು ಪೊಲೀಸರು ಆಸ್ಪತ್ರೆಗೆ ಸಿಸಿಬಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಂಪತ್‌ರಾಜ್‌ ಆರೋಪಿಯಾಗಿದ್ದಾರೆ.

Vijaya Karnataka Web 30 Oct 2020, 5:12 pm
ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಮೇಯರ್‌ ಸಂಪತ್‌ ರಾಜ್‌ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ.
Vijaya Karnataka Web ಸಂಪತ್‌ರಾಜ್‌
ಸಂಪತ್‌ರಾಜ್‌


ಕೋವಿಡ್‌ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಂಪತ್‌ ರಾಜ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಸಂಪತ್‌ರಾಜ್‌ ಬಿಡುಗಡೆಯ ಕುರಿತು ಮಾಹಿತಿ ನೀಡುವಂತೆ ಆಸ್ಪತ್ರೆಗೆ ಪೊಲೀಸರು ಸೂಚನೆ ನೀಡಿದ್ದರು.

ಆದರೆ ಯಾವುದೇ ಮಾಹಿತಿಯನ್ನು ನೀಡದೆ ಸಂಪತ್‌ರಾಜ್‌ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿದೆ. ಈ ಕುರಿತು ಪೊಲೀಸರು ಆಸ್ಪತ್ರೆಗೆ ಸಿಸಿಬಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬ್ಯಾಪ್ಟಿಸ್ಟ್‌ ಆಸ್ಪತ್ರೆಗೆ ತೆರಳಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೇ ಸಂಪತ್ ರಾಜ್‌ಗೆ ಹುಡುಕಾಟವನ್ನು‌ ಸಿಸಿಬಿ ಪೊಲೀಸರು ಆರಂಭಿಸಿದ್ದಾರೆ.

ಕೋಮು ಭಾವನೆಗೆ ಧಕ್ಕೆ ಉಂಟು ಮಾಡುವಂಥ ಪೋಸ್ಟ್‌ ಅನ್ನು ಶಾಸಕ ಅಖಂಡ ಶ್ರೀನಿವಾಸ ಅವರ ಸೋದರಿ ಪುತ್ರ ನವೀನ್‌ ಫೇಸ್‌ಬುಕ್‌ನಲ್ಲಿ ಹಾಕಿದ್ದರು, ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿ ಪ್ರತಿಭಟನೆ ನಡೆಯಿತು. ಇದು ಹಿಂಸಾಚಾರೂಪಕ್ಕೆ ತಿರುಗಿ ಪ್ರತಿಭಟನೆಕಾರರು ಶಾಸಕರ ಮನೆ ಹಾಗೂ ಪೊಲೀಸ್‌ ಠಾಣೆಯನ್ನು ಸುಟ್ಟು ಹಾಕಿದರು.

ನಂತರ ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಮೂವರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಹಲವು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದರು. ಪೊಲೀಸ್‌ ವಾಹನಗಳು ಪ್ರತಿಭಟನಾಕಾರರ ಆಕ್ರೋಶಕ್ಕೆ ತುತ್ತಾಗಿತ್ತು. ಇದಲ್ಲದೆ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಯಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ