ಆ್ಯಪ್ನಗರ

ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ, ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ, ಸುಧಾಕರ್‌

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದೆ. ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಅದು ನಿಯಂತ್ರಣಕ್ಕೆ ಬರುತ್ತಿಲ್ಲ. ಆದರೆ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಸಜ್ಜಾಗಿದೆ ಎನ್ನುತ್ತಾರೆ ಸಚಿವ ಸುಧಾಕರ್

Vijaya Karnataka Web 29 Jun 2020, 9:26 am
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾನುವಾರ ಒಂದೇ ದಿನ 783 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೋವಿಡ್‌ 19 ಅಟ್ಟಹಾಸ ಜನರಲ್ಲಿ ಆತಂಕ ಮೂಡಿಸಿದೆ.
Vijaya Karnataka Web sudhakar


ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಬೆಂಗಳೂರು ನಗರದಲ್ಲಿ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಂಪೂರ್ಣ ಸಜ್ಜಾಗಿದೆ ಎಂದಿದ್ದಾರೆ.

ಗಮನಿಸಿ: ಬೆಂಗಳೂರಿನ ಇತರೆ ಸರಕಾರಿ ಆಸ್ಪತ್ರೆಗಳಲ್ಲೂ ಕೊರೊನಾ ಚಿಕಿತ್ಸೆ, ಇಲ್ಲಿದೆ ಮಾಹಿತಿ!

“ಜೂನ್ 23ರಂದು 1556 ಕೋವಿಡ್ ಪ್ರಕರಣಗಳನ್ನು ಹೊಂದಿದ್ದ ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡು ನೆನ್ನೆಯ ವೇಳೆಗೆ 3419 ಪ್ರಕರಣಗಳನ್ನು ಹೊಂದಿದೆ. ರಾಜ್ಯದ ಒಟ್ಟು ಸೋಂಕಿತರ ಪೈಕಿ 25.92% ಪ್ರಕರಣಗಳು ಬೆಂಗಳೂರಿನಲ್ಲಿವೆ. ನಗರದಲ್ಲಿ ಹೆಚ್ಚುತ್ತಿರುವ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.


ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಪ್ರಮಾಣದಲ್ಲಿ ಭಾರೀ ಏರಿಕೆಯಾಗುತ್ತಿದೆ. ಇದು ಆತಂಕವನ್ನು ಮೂಡಿಸಿದೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಬೆಡ್‌ಗಳ ಕೊರತೆ ಎದುರಾಗಿದ್ದು ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.

ಪೊಲೀಸ್ ಇಲಾಖೆಯನ್ನು ಕಾಡುತ್ತಿದೆ ಕೊರೊನಾ, ಸೋಂಕಿತ ಎಎಸ್‌ಐ ಸಾವು

ಸೋಂಕಿತರ ಪೈಕಿ 155 ಮಂದಿಯ ಸ್ಥಿತಿ ಗಂಭೀರವಾಗಿದೆ. ಇನ್ನೊಂದೆಡೆ ಐಸಿಯುಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಇದು ಸರ್ಕಾರಕ್ಕೆ ಆತಂಕ ಹುಟ್ಟಿಸಿದೆ. ಈ ನಿಟ್ಟಿನಲ್ಲಿ ಮುಂದಿನ ಅಪಾಯ ಎದುರಿಸಲು ಎಲ್ಲಾ ರೀತಿಯಲ್ಲಿ ಸಿದ್ಧತೆಗಳನ್ನು ನಡೆಸಲು ಸರ್ಕಾರ ಮುಂದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ