ಆ್ಯಪ್ನಗರ

ಮಹೀಂದ್ರಾ ಎಲೆಕ್ಟ್ರಿಕ್‌ ಆಟೋ ಮಾರುಟ್ಟೆಗೆ ಬಿಡುಗಡೆ

ಪರಿಸರ ಸಂರಕ್ಷ ಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು, ಪರಿಸರ ಸ್ನೇಹಿ ವಾಹನಗಳನ್ನು ಬಳಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈ ಜೋಡಿಸಬೇಕಿದೆ.

Vijaya Karnataka Web 16 Nov 2018, 8:23 am
ಆನೇಕಲ್‌: ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಮಹೀಂದ್ರ ಎಲೆಕ್ಟ್ರಿಕ್‌ ಮೊಬಿಲಿಟಿ ಲಿಮಿಟೆಡ್‌ ಘಟಕದಲ್ಲಿ ಎಲೆಕ್ಟ್ರಿಕ್‌ ಆಟೊವನ್ನು ಗುರುವಾರ ಬಿಡುಗಡೆಗೊಳಿಸಲಾಯಿತು.
Vijaya Karnataka Web Auto


ಎಲೆಕ್ಟ್ರಿಕ್‌ ಆಟೊ ಲೋಕಾರ್ಪಣೆ ಮಾಡಿದ ಕಂದಾಯ ಹಾಗೂ ಕೌಶಲಾಭಿವೃದ್ಧಿ ಉದ್ಯಮಶೀಲತೆ ಖಾತೆ ಸಚಿವ ಆರ್‌.ವಿ.ದೇಶಪಾಂಡೆ ಮಾತನಾಡಿ ಪರಿಸರ ಸಂರಕ್ಷ ಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು, ಪರಿಸರ ಸ್ನೇಹಿ ವಾಹನಗಳನ್ನು ಬಳಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈ ಜೋಡಿಸಬೇಕಿದೆ. ಮಹೀಂದ್ರಾ ಎಲೆಕ್ಟ್ರಿಕ್‌ ಮೊಬಿಲಿಟಿ ಲಿಮಿಟೆಡ್‌ ಹೊರತಂದಿರುವ ವಿದ್ಯುತ್‌ ಚಾಲಿತ ತ್ರಿಚಕ್ರ ವಾಹನ ಪರಿಸರ ಸಂರಕ್ಷ ಣೆಗೆ ಹಾಗೂ ಮಾಲಿನ್ಯವನ್ನು ತಡೆಗಟ್ಟಲು ನೆರವಾಗುತ್ತದೆ ಎಂದರು.

ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಕೈಗಾರಿಕೆಗಳಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಲು ರಾಜ್ಯ ಸರಕಾರ ಕ್ರಿಯಾ ಯೋಜನೆ ತಯಾರಿಸಿದೆ. ಬೆಂಗಳೂರಿನ ಮೂಲಸೌಲಭ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದರ ಜತೆ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.

ಮಹೀಂದ್ರ ಎಲೆಕ್ಟ್ರಿಕ್‌ ಮೊಬಿಲಿಟಿ ಲಿಮಿಟೆಡ್‌ನ ಅಧ್ಯಕ್ಷ ಡಾ.ಪವನ್‌ ಗೊಯೆಂಕಾ ಮಾತನಾಡಿ, ಭಾರತದಲ್ಲಿ ಅಭಿವೃದ್ಧಿಪಡಿಸಿದ ಮೊಟ್ಟಮೊದಲ ಲಿ-ಅಯಾನ್‌ ತ್ರಿಚಕ್ರ ವಾಹನ ಟೆರೊ ಬಿಡುಗಡೆ ಮಾಡಲು ನಮಗೆ ಹೆಮ್ಮೆ ಎನಿಸುತ್ತದೆ. ಈ ಆಟೊ ಪರಿಸರ ಸ್ನೇಹಿ ಆಗಿರುವ ಜತೆಗೆ ಮೈಲೇಜ್‌ ಹೆಚ್ಚು ನೀಡಲಿದೆ.

ಕರ್ನಾಟಕ ಸರಕಾರ ಈ ವಿನೂತನ ಯೋಜನೆಗೆ ಅಭೂತಪೂರ್ವ ಬೆಂಬಲ ನೀಡಿದೆ. 100 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಈ ಘಟಕದಲ್ಲಿ ಬ್ಯಾಟರಿ ಪ್ಯಾಕ್‌ಗಳ ಉತ್ಪಾದನೆ, ಪವರ್‌ ಎಲೆಕ್ಟ್ರಾನಿಕ್ಸ್‌ ಮತ್ತು ಮೋಟಾರು ಜೋಡಣಾ ಘಟಕದ ಉತ್ಪಾದನೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ