ಆ್ಯಪ್ನಗರ

10 ತಿಂಗಳೊಳಗಾಗಿ ಪ್ರತಿ ವಲಯಕ್ಕೆ ಕಸದಿಂದ ವಿದ್ಯುತ್‌ ಘಟಕ: ಪರಮೇಶ್ವರ

ಬೆಂಗಳೂರಿನ ಪ್ರತಿ ವಲಯದಲ್ಲಿ ಕಸದಿಂದ ವಿದ್ಯುತ್‌ ಉತ್ಪಾದನಾ ಘಟಕಗಳನ್ನು 10 ತಿಂಗಳೊಳಗೆ ಸ್ಥಾಪಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ ಹೇಳಿದ್ದಾರೆ.

Vijaya Karnataka Web 25 Oct 2018, 7:07 pm
ಬೆಂಗಳೂರು: ನಗರದಲ್ಲಿ ಕಸದಿಂದ ವಿದ್ಯುತ್ ಉತ್ಪಾದನೆ ಯೋಜನೆ ಘಟಕಗಳನ್ನು 10 ತಿಂಗಳೊಳಗಾಗಿ ಪ್ರತಿ ವಲಯದಲ್ಲಿ ತೆರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಹೇಳಿದ್ದಾರೆ.
Vijaya Karnataka Web paramesh


ವಿಕಾಸಸೌಧದಲ್ಲಿ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ಯಾಜ್ಯ ನಿರ್ವಹಣೆ ಸಂಬಂಧ ಎರಡು ವರ್ಷದಿಂದ ಟೆಂಡರ್ ಕರೆದಿರಲಿಲ್ಲ. ಇನ್ನೊಂದು ತಿಂಗಳೊಳಗಾಗಿ ಹೊಸದಾಗಿ ಟೆಂಡರ್ ಆಹ್ವಾನಿಸಲಾಗುವುದು. ಕಸ ನಿರ್ವಹಣೆಯ ಮಷಿನರಿಗಳನ್ನು ಗುತ್ತಿಗೆದಾರರು ಹೊಂದಿರಬೇಕು ಎಂದು ಷರತ್ತು ಹಾಕಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತಿ ಬೀದಿಯಲ್ಲಿ ಎಲ್‌ಇಡಿ ಬಲ್ಬ್‌ ಅಳವಡಿಸುವ ಸಂಬಂಧ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯಬೇಕಿದೆ. 800 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಶೀಘ್ರವೇ ಆರಂಭಗೊಳ್ಳಲಿದೆ. ಇದರಿಂದ ಶೇ.80ರಷ್ಟು ವಿದ್ಯುತ್ ಉಳಿತಾಯ ಆಗಲಿದೆ. ಇದರ ನಿರ್ವಹಣೆಗೆ ಪ್ರತ್ಯೇಕ ಕಂಟ್ರೋಲ್‌ ರೂಮ್ ಇರಲಿದ್ದು, ಪ್ರತಿ ಬೀದಿಯನ್ನು ನಿರ್ವಹಣೆ ಮಾಡುವಂತೆ ವ್ಯವಸ್ಥೆ ಮಾಡಲಾಗುವುದು. ಗಾಂಧೀನಗರ ಹಾಗೂ ಸ್ವಾತಂತ್ರ್ಯ ಉದ್ಯಾನವನದಲ್ಲಿನ ಮಲ್ಟಿಪಾರ್ಕಿಂಗ್ ಕಾಮಗಾರಿ ಶೀಘ್ರವೇ ಮುಗಿಸಲು ಸೂಚನೆ ನೀಡಿದ್ದೇನೆ. ಜೆ.ಸಿ. ರಸ್ತೆಯಲ್ಲಿನ ಪಾರ್ಕಿಂಗ್ ಎರಡು ಮಹಡಿ ಹೆಚ್ಚಲು ಡಿಪಿಆರ್ ಮಾಡಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ವಿಭಜನೆ ತೀರ್ಮಾನ ಆಗಿಲ್ಲ

ಬಿಬಿಎಂಪಿ ವಿಭಜನೆ ಮಾಡುವ ತೀರ್ಮಾನ ಸಂಪೂರ್ಣವಾಗಿಲ್ಲ. ಹೆಚ್ಚಿನ‌ ಹೊರೆ ಆಯುಕ್ತರ ಒಬ್ಬರ ಮೇಲೇ ಬೀಳುತ್ತಿದೆ. ಬಿ.ಎಸ್‌ ಪಾಟೀಲ್ ವರದಿ ಪ್ರಕಾರ ಆಡಳಿತ ವಿಭಜನೆ ಮಾಡಲು ಸಲಹೆ ನೀಡಿದ್ದಾರೆ.‌ಈ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ. ಹೀಗಾಗಿ ಬೆಂಗಳೂರು ಆ್ಯಕ್ಟ್ ತರುವುದು ಕೂಡ ಚರ್ಚೆಯಲ್ಲಿದೆ ಎಂದು ಡಿಸಿಎಂ ತಿಳಿಸಿದ್ದಾರೆ

ಬಿಬಿಎಂಪಿ ಮಹಿಳಾ ಪೌರಕಾರ್ಮಿಕರು ಮೀಟು ಅಭಿಯಾನದಡಿ ಆರೋಪ ಮಾಡುವರು ನೇರ ದೂರ ನೀಡಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಯರ್‌ಲೆಸ್‌‌‌ನಲ್ಲಿ ಅಕ್ರಮ‌ ನೇಮಕಾತಿ ಇದ್ದರೆ ಅವರ ಮೇಲೆ ಕ್ರಮ‌ ತೆಗೆದು ಕೊಳ್ಳುತ್ತೇವೆ. ಡಿಜಿ ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ