ಆ್ಯಪ್ನಗರ

Breaking News: ಮಾಜಿ ಸಿಎಂ ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ!

ಆತ್ಮಹತ್ಯೆಗೆ ಒಳಗಾಗಿರುವ ಸೌಂದರ್ಯ ಅವರು ಬೆಂಗಳೂರಿನ ವಸಂತ ನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದರು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯಗೆ 2018ರಲ್ಲಿ ವೈದ್ಯ ಡಾ. ನೀರಜ್‌ ಅವರ ಜೊತೆ ವಿವಾಹವಾಗಿತ್ತು. ಮೇಲ್ನೋಟಕ್ಕೆ ಕೌಟುಂಬಿಕ ಸಮಸ್ಯೆ ಇರಬಹುದೆಂದು ಅಂದಾಜಿಸಲಾಗಿದ್ದು, ಸೌಂದರ್ಯ ಅವರ ಆತ್ಮಹತ್ಯೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Vijaya Karnataka Web 28 Jan 2022, 4:33 pm
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ (30) ಅವರು ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
Vijaya Karnataka Web saundarya


ಇಂದು ಬೆಳಗ್ಗೆ ಸುಮಾರು 10 ಗಂಟೆ ಸುಮಾರಿಗೆ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಸೌಂದರ್ಯ ಅವರು ಬಿಎಸ್‌ ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿ ಅವರ ಮಗಳಾಗಿದ್ದಾರೆ. ಘಟನೆ ಸಂಬಂಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತ ಸೌಂದರ್ಯ ಅವರು ಬೆಂಗಳೂರಿನ ವಸಂತ ನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದರು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯಗೆ 2018ರಲ್ಲಿ ವೈದ್ಯ ಡಾ. ನೀರಜ್‌ ಅವರ ಜೊತೆ ವಿವಾಹವಾಗಿತ್ತು. ಮೇಲ್ನೋಟಕ್ಕೆ ಕೌಟುಂಬಿಕ ಸಮಸ್ಯೆ ಇರಬಹುದೆಂದು ಅಂದಾಜಿಸಲಾಗಿದ್ದು, ಸೌಂದರ್ಯ ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ದಂಪತಿಗಳ 'ಅಹಂ'ಗೆ ಮಕ್ಕಳ ಅಮೂಲ್ಯ ಬಾಲ್ಯ ಬಲಿ : ಕರ್ನಾಟಕ ಹೈಕೋರ್ಟ್‌
ಸೌಂದರ್ಯಗೆ ಒಂಭತ್ತು ತಿಂಗಳ ಒಂದು ಪುಟ್ಟ ಮಗು ಇದ್ದು, ಪತಿ ಡಾ.ನೀರಜ್ ಅವರು ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಗಂಡ ಕೆಲಸಕ್ಕೆ ಹೋದ ಬಳಿಕ ಸೌಂದರ್ಯ 10 ಗಂಟೆಯ ವೇಳೆಗೆ ತನ್ನ ಕೋಣೆಯನ್ನು ಲಾಕ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ರಾಜ್ಯ ಸರ್ಕಾರದ ಸಚಿವರನೇಕರು ಈಗಾಗಲೇ ಯಡಿಯೂರಪ್ಪ ಅವರ ಬೆಂಗಳೂರಿನ ಕೆಕೆ ರಸ್ತೆಯಲ್ಲಿರುವ ಕಾವೇರಿ ನಿವಾಸಕ್ಕೆ ಆಗಮಿಸಿದ್ದು, ಘಟನೆಯಿಂದ ದಿಗ್ಭ್ರಮೆಗೆ ಒಳಗಾಗಿರುವ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಸಾಂತ್ವನ ಹೇಳಲು ಬಿಎಸ್‌ವೈ ನಿವಾಸಕ್ಕೆ ದೌಡಾಯಿಸುತ್ತಿದ್ಧಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ