ಆ್ಯಪ್ನಗರ

ದೇವೇಗೌಡರಿಗೆ ಕೋವಿಡ್‌, ಆಸ್ಪತ್ರೆಗೆ ದಾಖಲು

88 ವರ್ಷದ ದೇವೇಗೌಡರಿಗೆ ಕೋವಿಡ್‌ ದೃಢಪಟ್ಟಿದ್ದು ಆರೋಗ್ಯ ಸ್ಥಿರವಾಗಿದೆ. ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆಯೇ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Vijaya Karnataka 22 Jan 2022, 10:19 pm
ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಕೋವಿಡ್‌ ಕಾಣಿಸಿಕೊಂಡಿದ್ದು, ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Vijaya Karnataka Web ಎಚ್‌ಡಿ ದೇವೇಗೌಡ
ಎಚ್‌ಡಿ ದೇವೇಗೌಡ


88 ವರ್ಷದ ದೇವೇಗೌಡರಿಗೆ ಕೋವಿಡ್‌ ದೃಢಪಟ್ಟಿದ್ದು ಆರೋಗ್ಯ ಸ್ಥಿರವಾಗಿದೆ. ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆಯೇ ಶನಿವಾರ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಜ.31ರ ವರೆಗೆ ನಿಷೇಧಾಜ್ಞೆ ಜಾರಿ, ನೈಟ್‌ ಕರ್ಫ್ಯೂ ಮುಂದುವರಿಕೆ: ಕಮಲ್ ಪಂತ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಎಚ್‌.ಡಿ. ದೇವೇಗೌಡರೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದರು. ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದರು. ಹಾಗೆಯೇ ಮಣಿಪಾಲ್‌ ಆಸ್ಪತ್ರೆ ವೈದ್ಯರೊಂದಿಗೂ ಮಾತನಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಈ ವಯಸ್ಸಿನಲ್ಲೂಉತ್ತಮ ಆರೋಗ್ಯ ಹೊಂದಿದ್ದಾರೆ. ಆದರೂ ಈ ಕೋವಿಡ್‌ ಯಾರನ್ನೂ ಬಿಟ್ಟಿಲ್ಲ. ಅವರು ಶೀಘ್ರ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹಾರೈಸಿದ್ದಾರೆ.

ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಳ

ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿಇಳಿಕೆಯಾಗುತ್ತಿದೆ. ಅಷ್ಟೇ ಅಲ್ಲ, ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತ ಪ್ರಕರಣಗಳಿಗಿಂತ ಚೇತರಿಸಿಕೊಳ್ಳುವವರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಕಳೆದ 24 ತಾಸುಗಳಲ್ಲಿ ಸೋಂಕಿತರ ಸಂಖ್ಯೆ 12 ಸಾವಿರದಷ್ಟು ಕಡಿಮೆಯಾಗಿದೆ. ಶುಕ್ರವಾರ 29 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಆದರೆ, ಶನಿವಾರ ಕೇವಲ 17,266 ಮಂದಿಗೆ ಮಾತ್ರ ಸೋಂಕು ತಗಲಿರುವುದು ದೃಢಪಟ್ಟಿದೆ. ಸೋಂಕಿತರಿಗಿಂತ ಅಧಿಕ ಮಂದಿ ಸೋಂಕಿನಿಂದ ಮುಕ್ತಿ ಪಡೆದಿದ್ದಾರೆ. ಶನಿವಾರ ಒಂದೇ ದಿನ 22,511 ಮಂದಿ ಗುಣಮುಖರಾಗಿದ್ದಾರೆ.

ಹೆಚ್ಚು ಪಾಸಿಟಿವ್‌ ಕೇಸ್‌ ಇದ್ದರೆ ಏಳು ದಿನ ಶಾಲೆ ಬಂದ್‌. ಕಡಿಮೆ ಇದ್ದರೆ 3 ದಿನ ಬಂದ್‌: ಸಚಿವ ಬಿ.ಸಿ ನಾಗೇಶ್‌

ಸೋಂಕಿತರ ಕ್ವಾರಂಟೈನ್‌ ಅವಧಿಯನ್ನು 7 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಸೌಮ್ಯ ಲಕ್ಷಣಗಳಿಂದಾಗಿ ಮನೆಯಲ್ಲಿಯೇ ಪ್ರತ್ಯೇಕ ಆರೈಕೆಗೆ ಒಳಗಾಗಿರುವವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ನಗರದಲ್ಲಿಇದುವರೆಗೆ 15,59,358 ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 13,24,538 ಮಂದಿ ಗುಣಮುಖರಾಗಿದ್ದಾರೆ. ಉಳಿದ 2,18,329 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ