ಆ್ಯಪ್ನಗರ

ಲಾಕ್‌ಡೌನ್ ಉಲ್ಲಂಘನೆ: ಅನಿವಾರ್ಯವಾದರೆ ಪೊಲೀಸ್ ಫೋರ್ಸ್‌ ಬಳಕೆ, ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಮಧ್ಯಾಹ್ನ 12 ಗಂಟೆಯ ಬಳಿಕ ಲಾಕ್‌ಡೌನ್ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು, ಅನಿವಾರ್ಯ ಆದರೆ ಪೊಲೀಸ್‌ ಬಲ ಪ್ರಯೋಗ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

Vijaya Karnataka Web 15 Jul 2020, 11:07 am
ಬೆಂಗಳೂರು: ಅಗತ್ಯ ಸಾಮಗ್ರಿಗಳ ಖರೀದಿ ಮಾಡಲು ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ 12 ಗಂಟೆಯ ವರೆಗೆ ಜನರಿಗೆ ಹೊರಬರಲು ಅವಕಾಶ ನೀಡಲಾಗಿದೆ. ಆದರೆ ಮಧ್ಯಾಹ್ಮದ ಬಳಿಕ ಲಾಕ್‌ಡೌನ್ ಉಲ್ಲಂಘನೆ ಮಾಡಿದರೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web basavaraj bommai


ಬೆಂಗಳೂರಿನಲ್ಲಿ ಮಾತನಾಡಿದ ಅವರು, 12 ಗಂಟೆಯ ಬಳಿಕ ಲಾಕ್‌ಡೌನ್ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಅನಿವಾರ್ಯ ಬಂದರೆ ಪೊಲೀಸ್ ಫೋರ್ಸ್‌ ಪ್ರಯೋಗ ಮಾಡಲಾಗುವುದು. ಆದರೆ ಅಂತಹ ಪರಿಸ್ಥಿತಿಯನ್ನು ಸಾರ್ವಜನಿಕರು ತಂದು ಕೊಡಬಾರದು ಎಂದು ವಿನಂತಿ ಮಾಡಿದ್ದಾರೆ.

ಬೆಂಗಳೂರು ಲಾಕ್‌ಡೌನ್: ಅನಗತ್ಯವಾಗಿ ರಸ್ತೆಗಿಳಿದವರಿಗೆ ಖಾಕಿ ಎಚ್ಚರಿಕೆ

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಗೆಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಾಹನ ಸಂಚಾರ ನಿಯಂತ್ರಣ ಮಾಡುವ ನಿಟ್ಟಿನ್ಲಲಿ ಎಲ್ಲಾ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. 12 ಗಂಟೆಯ ವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ನೀಡಿಲಾಗಿದೆ. ಜನರಿಗೆ ಸದ್ಯದ ಪರಿಸ್ಥಿತಿ ಅರಿವಾಗಿದೆ ಎಂದರು.

ಬೆಂಗಳೂರು ಲಾಕ್‌ಡೌನ್: ಕೊರೊನಾ ಭಯದಲ್ಲಿ ಸ್ತಬ್ಧವಾದ ಸಿಲಿಕಾನ್‌ ಸಿಟಿ

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆಯಿಂದ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ