ಆ್ಯಪ್ನಗರ

ಸೋಂಕಿತರಿಗೆ ಶೇ.50ರಷ್ಟು ಹಾಸಿಗೆ ನೀಡದ ಆಸ್ಪತ್ರೆಗಳ ವಿರುದ್ಧ ಕ್ರಮ: ಅಶ್ವತ್ಥ ನಾರಾಯಣ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಹಾಸಿಗೆಗಳ ಪೈಕಿ ಶೇ.50ರಷ್ಟನ್ನು ಸೋಂಕಿತರ ಚಿಕಿತ್ಸೆಗಾಗಿ ಸರಕಾರದ ವಶಕ್ಕೆ ನೀಡಬೇಕು. ಹಾಸಿಗೆ ಕೊಡದ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ಎಚ್ಚರಿಕೆ ನೀಡಿದ್ದಾರೆ.

Vijaya Karnataka Web 11 Jul 2020, 10:47 pm
ಬೆಂಗಳೂರು: ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಹಾಸಿಗೆಗಳ ಪೈಕಿ ಶೇ.50ರಷ್ಟನ್ನು ಸೋಂಕಿತರ ಚಿಕಿತ್ಸೆಗಾಗಿ ಸರಕಾರದ ವಶಕ್ಕೆ ನೀಡಬೇಕು. ಹಾಸಿಗೆ ಕೊಡದ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ಎಚ್ಚರಿಕೆ ನೀಡಿದರು.
Vijaya Karnataka Web ashwathnarayan new 1


ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯುವ ಸಂಬಂಧ ಬಿಬಿಎಂಪಿ ಪಶ್ಚಿಮ ವಲಯದ ಶಾಸಕರು, ಕಾರ್ಪೋರೇಟರ್‌ಗಳು ಮತ್ತು ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

''ಖಾಸಗಿ ಆಸ್ಪತ್ರೆಗಳು ಸರಕಾರದ ಸೂಚನೆಗಳನ್ನು ಪಾಲಿಸದಿರುವುದು ಮತ್ತು ಕೋವಿಡ್‌ ಬಗ್ಗೆ ನಿರ್ಲಕ್ಷ್ಯ ತಾಳುತ್ತಿರುವುದು ಕಂಡುಬಂದಿದೆ. ಅಂತಹ ಆಸ್ಪತ್ರೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಸೋಂಕಿತರು ಮತ್ತು ಅನ್ಯ ಕಾಯಿಲೆಯ ರೋಗಿಗಳಿಗೆ ಸಮಾನ ಮಹತ್ವ ನೀಡಿ ಚಿಕಿತ್ಸೆ ನೀಡಬೇಕು. ಆದರೆ, ಕೆಲ ಆಸ್ಪತ್ರೆಗಳು ಚಿಕಿತ್ಸೆಗೆ ನಿರಾಕರಿಸುತ್ತಿರುವ ದೂರುಗಳು ಬರುತ್ತಿವೆ. ಅಂತಹ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು,'' ಎಂದು ತಿಳಿಸಿದರು.

ಜು.13ರಿಂದ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಶುರು: 71 ಸಾವಿರ ಶಿಕ್ಷಕರ ನೇಮಕ

ಪಶ್ಚಿಮದಲ್ಲಿ ಕೋವಿಡ್‌ ಕಾಲ್‌ ಸೆಂಟರ್‌:
''ಪಶ್ಚಿಮ ವಲಯದಲ್ಲಿ ಕೊರೊನಾ ಬಗ್ಗೆ ಸಮಗ್ರ ಮಾಹಿತಿ ನೀಡುವ ಹಾಗೂ ಆಸ್ಪತ್ರೆಗಳು, ಕೋವಿಡ್‌ ಆರೈಕೆ ಕೇಂದ್ರಗಳು, ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರ ನಡುವೆ ನೇರ ಸಂಪರ್ಕ ಸೇತುವೆಯಾಗಿ ದಿನದ 24 ಗಂಟೆ ಕೆಲಸ ಮಾಡುವ ಕಾಲ್‌ ಸೆಂಟರ್‌ವೊಂದನ್ನು ತೆರೆಯಲಾಗುತ್ತಿದೆ. ಇದರಿಂದ ಎಲ್ಲಮಾಹಿತಿಯೂ ಅಂಗೈನಲ್ಲೇ ಸಿಗುತ್ತದೆ. ಸೋಂಕಿತರಿಗೆ ಚಿಕಿತ್ಸೆ, ಆಸ್ಪತ್ರೆಗಳಿಗೆ ಸಾಗಿಸುವುದು, ಕ್ವಾರಂಟೈನ್‌ ಮತ್ತು ಹೋಮ್‌ ಕ್ವಾರಂಟೈನ್‌ ಸೇರಿದಂತೆ ಎಲ್ಲಮಾಹಿತಿ ಲಭ್ಯವಾಗುತ್ತದೆ,'' ಎಂದು ತಿಳಿಸಿದರು.

35 ಸಾವಿರ ದಾಟಿದ ಕೊರೊನಾ: 20 ಸಾವಿರ ದಾಟಿದ ಸಕ್ರಿಯ ಸೋಂಕಿತರು!

ಪಿಎಚ್‌ಸಿಗಳಲ್ಲಿ ಟ್ರೂನ್ಯಾಟ್‌ ಯಂತ್ರ:
''ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಗಳ ಕೊರತೆಯಾದರೆ ಸ್ಥಳೀಯವಾಗಿ ಇರುವ ಸಣ್ಣ-ಪುಟ್ಟ ಆಸ್ಪತ್ರೆಗಳಲ್ಲಿನ ಹಾಸಿಗೆಗಳನ್ನು ಸರಕಾರದ ವಶಕ್ಕೆ ಪಡೆಯುವ ಸಂಬಂಧ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು. ಎಲ್ಲಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟ್ರೂನ್ಯಾಟ್‌ ಯಂತ್ರಗಳನ್ನು ಅಳವಡಿಸಿ, ಗಂಟಲು ದ್ರವ ಸಂಗ್ರಹಿಸಿದ ಅರ್ಧ ತಾಸಿನೊಳಗೆ ವರದಿ ಸಿಗುವಂತೆ ಮಾಡಲಾಗುವುದು,'' ಎಂದು ಡಾ. ಸಿ.ಎನ್‌.ಅಶ್ವತ್ಥ ನಾರಾಯಣ್‌ ಹೇಳಿದರು.

ಮಂಗಳವಾರ ರಾತ್ರಿ 8 ರಿಂದ ಬೆಂಗಳೂರಿನಲ್ಲಿ ಒಂದು ವಾರ ಲಾಕ್‌ಡೌನ್‌ - ಅಧಿಕೃತ ಘೋಷಣೆ

ಸಚಿವ ಕೆ.ಗೋಪಾಲಯ್ಯ, ಶಾಸಕ ಜಮೀರ್‌ ಅಹ್ಮದ್‌, ಐಎಎಸ್‌ ಅಧಿಕಾರಿ ಉಜ್ವಲ್‌ಕುಮಾರ್‌ ಘೋಷ್‌, ಪಾಲಿಕೆಯ ವಿಶೇಷ ಆಯುಕ್ತ ಬಸವರಾಜ್‌, ಜಂಟಿ ಆಯುಕ್ತ ಚಿದಾನಂದ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ