ಆ್ಯಪ್ನಗರ

ಇಂದಿರಾ ಕ್ಯಾಂಟೀನ್‌ಗಳು ಇಂದು ಬಂದ್‌

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ ಮತ್ತು ಕೇಂದ್ರೀಕೃತ ಅಡುಗೆ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜೆ ಘೋಷಿಸಿರುವುದರಿಂದ ಶನಿವಾರ ಒಂದು ದಿನದ ಮಟ್ಟಿಗೆ ನಗರದಲ್ಲಿನ ಎಲ್ಲ ಕ್ಯಾಂಟೀನ್‌ಗಳನ್ನು ಮುಚ್ಚಲು ಬಿಬಿಎಂಪಿ ತೀರ್ಮಾನಿಸಿದೆ.

Vijaya Karnataka 12 May 2018, 5:00 am
ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ ಮತ್ತು ಕೇಂದ್ರೀಕೃತ ಅಡುಗೆ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜೆ ಘೋಷಿಸಿರುವುದರಿಂದ ಶನಿವಾರ ಒಂದು ದಿನದ ಮಟ್ಟಿಗೆ ನಗರದಲ್ಲಿನ ಎಲ್ಲ ಕ್ಯಾಂಟೀನ್‌ಗಳನ್ನು ಮುಚ್ಚಲು ಬಿಬಿಎಂಪಿ ತೀರ್ಮಾನಿಸಿದೆ.
Vijaya Karnataka Web indira canteens holiday today
ಇಂದಿರಾ ಕ್ಯಾಂಟೀನ್‌ಗಳು ಇಂದು ಬಂದ್‌


ಇಂದಿರಾ ಕ್ಯಾಂಟೀನ್‌ನಲ್ಲಿ ನಿತ್ಯ 2.40 ಲಕ್ಷ ಮಂದಿ ಆಹಾರ ಸೇವಿಸುತ್ತಿದ್ದಾರೆ. ಪ್ರತಿ ಕ್ಯಾಂಟೀನ್‌ನಲ್ಲಿ 8 ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದು, ಇವರೆಲ್ಲರಿಗೂ ಮತದಾನ ಮಾಡಲು ಅವಕಾಶ ಕಲ್ಪಿಸುವ ಸಲುವಾಗಿ ಇಂದಿರಾ ಕ್ಯಾಂಟೀನ್‌ಗಳಿಗೆ ಮುಚ್ಚಲಾಗುತ್ತಿದೆ. ಭಾನುವಾರ ಎಂದಿನಂತೆ ತೆರೆಯಲಿವೆ.

''ಕಾರ್ಮಿಕರ ಕಾನೂನಿನ ಅನ್ವಯ ಮತದಾನದಂದು ಎಲ್ಲರಿಗೂ ರಜೆ ನೀಡಬೇಕಿದೆ. ಹೀಗಾಗಿ, ಇಂದಿರಾ ಕ್ಯಾಂಟೀನ್‌ಗಳು ಮತ್ತು ಅಡುಗೆ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಶನಿವಾರ ರಜೆ ಘೋಷಿಸಲಾಗಿದೆ. ಆದ ಕಾರಣ, ಮೂರು ಹೊತ್ತು ಊಟ, ತಿಂಡಿ ವಿತರಣೆ ಮಾಡುವುದಿಲ್ಲ. ಕ್ಯಾಂಟೀನ್‌ಗಳಲ್ಲಿ 1500ಕ್ಕೂ ಅಧಿಕ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ,'' ಎಂದು ಬಿಬಿಎಂಪಿ ವಿಶೇಷ ಆಯುಕ್ತ ಮನೋಜ್‌ ರಾಜನ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ