ಆ್ಯಪ್ನಗರ

ಆರ್‌.ಆರ್‌.ನಗರ ಉಪಚುನಾವಣೆ: ಜೆಡಿಎಸ್‌ನಿಂದ ಮೂವರು ಆಕಾಂಕ್ಷಿಗಳು ಫೈನಲ್‌..!

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ಆರ್.ಆರ್.ನಗರ ಕ್ಷೇತ್ರದ ಅಧ್ಯಕ್ಷ ಬೆಟ್ಟಸ್ವಾಮಿ ಗೌಡ, ಜ್ಞಾನಭಾರತಿ ಕೃಷ್ಣಮೂರ್ತಿ ಹೆಸರು ಅಂತಿಮವಾಗಿದೆ. ಈ ಬಾರಿ ಪ್ರಾಮಾಣಿಕ ಕಾರ್ಯಕರ್ತರಿಗೆ ಟಿಕೆಟ್‌ ನೀಡಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಅಪ್ಪಾಜಿಗೌಡ ಹೇಳಿದ್ದಾರೆ.

Vijaya Karnataka Web 2 Oct 2020, 6:06 pm
ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಈ ಬಾರಿ ಪ್ರಾಮಾಣಿಕ ಕಾರ್ಯಕರ್ತರಿಗೆ ಟಿಕೆಟ್‌ ನೀಡಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಅಪ್ಪಾಜಿಗೌಡ ಹೇಳಿದ್ದಾರೆ.
Vijaya Karnataka Web jds final three aspirants name for rr nagar by election
ಆರ್‌.ಆರ್‌.ನಗರ ಉಪಚುನಾವಣೆ: ಜೆಡಿಎಸ್‌ನಿಂದ ಮೂವರು ಆಕಾಂಕ್ಷಿಗಳು ಫೈನಲ್‌..!


ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಹಾಗೂ ಚುನಾವಣಾ ತಯಾರಿ ಕುರಿತಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ನಿವಾಸದಲ್ಲಿ ಶುಕ್ರವಾರ ನಡೆದ ಸಭೆ ಬಳಿಕ ಮಾತನಾಡಿದ ಅವರು, ಪ್ರಾಮಾಣಿಕ ಕಾರ್ಯಕರ್ತರಿಗೆ ಈ ಬಾರಿ ಟಿಕೆಟ್ ಕೊಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಜೆಡಿಎಸ್‌ ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ಆರ್.ಆರ್.ನಗರ ಕ್ಷೇತ್ರದ ಅಧ್ಯಕ್ಷ ಬೆಟ್ಟಸ್ವಾಮಿ ಗೌಡ, ಜ್ಞಾನಭಾರತಿ ಕೃಷ್ಣಮೂರ್ತಿ ಹೆಸರು ಅಂತಿಮವಾಗಿದೆ. ಈ ಮೂವರ ಹೆಸರಲ್ಲಿ ಒಬ್ಬರನ್ನು ವರಿಷ್ಠರು ಅಂತಿಮಗೊಳಿಸಲಿದ್ದಾರೆ. ಕಳೆದ ಎರಡು ಚುನಾವಣೆಯಲ್ಲಿ ಕ್ಷೇತ್ರದಲ್ಲಿ 50 ರಿಂದ 60 ಸಾವಿರಕ್ಕೂ ಹೆಚ್ಚು ಮತವನ್ನು ಜೆಡಿಎಸ್ ಪಡೆದಿತ್ತು ಎಂದರು.

ಆರ್‌.ಆರ್‌ ನಗರ ಬೈಎಲೆಕ್ಷನ್: ಅಭ್ಯರ್ಥಿ ಆಯ್ಕೆ ಕುರಿತಾಗಿ ಎಚ್‌ಡಿಕೆ ನಿವಾಸದಲ್ಲಿ ಸಭೆ

ಎರಡು ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರು ಭ್ರಮನಿರಸಗೊಂಡಿದೆ. ಆದ್ದರಿಂದ ಈ ಬಾರಿ ಜೆಡಿಎಸ್ ಗೆಲ್ಲುವ ಅವಕಾಶ ಹೆಚ್ಚಿದೆ. ಹೀಗಾಗಿ ಈ ಬಾರಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುತ್ತದೆ. ಮೂರು ಜನರಲ್ಲಿ ಒಬ್ಬರಿಗೆ ಟಿಕೆಟ್‌ನ್ನು ವರಿಷ್ಠರು ಫೈನಲ್ ಮಾಡುತ್ತಾರೆ ಎಂದು ಅಪ್ಪಾಜಿಗೌಡ ಹೇಳಿದರು.

ಮುನಿರತ್ನ v/s ಮುನಿರಾಜು: ಬಿಜೆಪಿ ವರಿಷ್ಠರ ಒಲವು ಯಾರ ಕಡೆಗೆ..?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ