ಆ್ಯಪ್ನಗರ

ಮೊಹಮ್ಮದ್‌ ನಲಪಾಡ್‌ಗೆ ಮಾರ್ಚ್‌ 21ರವರೆಗೆ ಜೈಲು ಖಚಿತ

ವಿದ್ವತ್‌ ಮೇಲಿನ ಹಲ್ಲೆ ಪ್ರಕರಣದ ಆರೋಪಿ , ಶಾಸಕ ಎನ್‌.ಎ.ಹ್ಯಾರೀಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ಮಾರ್ಚ್‌ 21ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್‌ ಆದೇಶ ನೀಡಿದೆ.

Vijaya Karnataka Web 7 Mar 2018, 12:25 pm
ಬೆಂಗಳೂರು: ವಿದ್ವತ್‌ ಮೇಲಿನ ಹಲ್ಲೆ ಪ್ರಕರಣದ ಆರೋಪಿ , ಶಾಸಕ ಎನ್‌.ಎ.ಹ್ಯಾರೀಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ಮಾರ್ಚ್‌ 21ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್‌ ಆದೇಶ ನೀಡಿದೆ.
Vijaya Karnataka Web judicial custody extended to mohammed nalapad
ಮೊಹಮ್ಮದ್‌ ನಲಪಾಡ್‌ಗೆ ಮಾರ್ಚ್‌ 21ರವರೆಗೆ ಜೈಲು ಖಚಿತ


ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯವು ಈ ಆದೇಶ ಪ್ರಕಟಿಸಿದೆ. ನಗರದ 63ನೇ ಸೆಷನ್ಸ್‌ ನ್ಯಾಯಾಲಯ ಮಾ.2ರಂದು ಜಾಮೀನು ಅರ್ಜಿ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಎಸ್‌.ಹರೀಶ್‌ ಕುಮಾರ್‌ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.

ಶಾಂತಿನಗರ ಶಾಸಕ ಹ್ಯಾರಿಸ್ ಅವರ ಪುತ್ರ ನಲಪಾಡ್‌ ಯುಬಿ ಸಿಟಿಯಲ್ಲಿ ವಿದ್ವತ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ ಗಾಯಗೊಂಡು ಮಲ್ಯ ಆಸ್ಪತ್ರೆ ಸೇರಿದ್ದ ವಿದ್ವತ್‌ ಬಳಿ ಹೋಗಿ ಅವರಿಗೆ ಮತ್ತು ಸೋದರನಿಗೆ ಬೆದರಿಕೆಯೊಡ್ಡಿ ಪರಾರಿಯಾಗಿದ್ದರು. ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

mohammed nalapad, nalapad in jail, mla haris , judicial custody, ಮೊಹಮ್ಮದ್‌ ನಲಪಾಡ್‌, ನ್ಯಾಯಾಂಗ ಬಂಧನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ