ಆ್ಯಪ್ನಗರ

‘ಹಿಂದಿ ದಿವಸ್‌’ ವಿರೋಧಿಸಿ ಸೆ.14ರಂದು ಬ್ಯಾಂಕ್‌ಗಳ ಮುಂದೆ ರಾಜ್ಯಾದ್ಯಂತ ಕರವೇ ಪ್ರತಿಭಟನೆ

ಹಿಂದಿಯನ್ನು ಇಡೀ ದೇಶದಲ್ಲಿ ಬೆಳೆಸುವ ಪ್ರಮುಖ ಉದ್ದೇಶ ಹಿಂದಿ ಭಾಷಿಕರಿಗೆ ಎಲ್ಲ ರಾಜ್ಯಗಳಲ್ಲೂ ಅಗತ್ಯ ಸೇವೆಗಳನ್ನು ಕಲ್ಪಿಸುವುದೇ ಆಗಿದೆ. ಇದರ ಮೂಲಕ ಇತರ ಭಾಷಿಕರಿಗೆ ಇಲ್ಲದ ಸೌಲಭ್ಯ ಹಿಂದಿ ಭಾಷಿಕರಿಗೆ ಒದಗಿಸಲಾಗುತ್ತಿದೆ. ಇದು ಸಂವಿಧಾನದ ಸಮಾನತೆಯ ಆಶಯಗಳಿಗೆ ವಿರುದ್ಧವಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಆರೋಪಿಸಿದ್ದಾರೆ.

Vijaya Karnataka 7 Sep 2021, 7:04 am

ಹೈಲೈಟ್ಸ್‌:

  • ‘ಹಿಂದಿ ದಿವಸ’ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ವಿರೋಧ
  • ಸೆಪ್ಟೆಂಬರ್‌ 14 ರಂದು ಕರವೇಯಿಂದ ಮುಂಭಾಗದಲ್ಲಿ ಪ್ರತಿಭಟನೆ
  • ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಘೋಷಣೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web karave narayana gowda
ಬೆಂಗಳೂರು: ಸೆಪ್ಟೆಂಬರ್‌ 14 ರಂದು ಭಾರತ ಒಕ್ಕೂಟ ಸರಕಾರ ನಡೆಸುವ ‘ಹಿಂದಿ ದಿವಸ’ ಆಚರಣೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸಿದ್ದು, ಆ ದಿನದಂದು ರಾಜ್ಯದ ಎಲ್ಲ ಭಾಗಗಳಲ್ಲೂ ರಾಷ್ಟ್ರೀಕೃತ ಮತ್ತು ಗ್ರಾಮೀಣ ಬ್ಯಾಂಕ್‌ಗಳ ಮುಂಭಾಗದಲ್ಲಿ ಪ್ರತಿಭಟನೆಗಳನ್ನು ನಡೆಸಲು ತೀರ್ಮಾನಿಸಿದೆ.
‘ಕನ್ನಡಿಗರ ತೆರಿಗೆ ಹಣದಲ್ಲಿ ನಡೆಸಲಾಗುವ ಹಿಂದಿ ದಿವಸ ಆಚರಣೆ ಕನ್ನಡಿಗರಿಗೆ ಬೇಕಾಗಿಲ್ಲ. ಭಾಷಾ ವೈವಿಧ್ಯದ ಭಾರತದಲ್ಲಿ ಒಂದು ಭಾಷೆಯನ್ನು ಹೊತ್ತು ಮೆರೆಸುವುದರ ಅಗತ್ಯವಿಲ್ಲ. ಭಾರತೀಯ ಭಾಷೆಗಳಲ್ಲಿ ಹಿಂದಿಯೂ ಒಂದು. ಅದಕ್ಕೆ ವಿಶೇಷ ಮಹತ್ವ, ಪ್ರೋತ್ಸಾಹ ನೀಡುವುದು ಅನ್ಯಾಯ. ಹಿಂದಿಯನ್ನು ಇಡೀ ದೇಶದಲ್ಲಿ ಬೆಳೆಸುವ ಪ್ರಮುಖ ಉದ್ದೇಶ ಹಿಂದಿ ಭಾಷಿಕರಿಗೆ ಎಲ್ಲ ರಾಜ್ಯಗಳಲ್ಲೂ ಅಗತ್ಯ ಸೇವೆಗಳನ್ನು ಕಲ್ಪಿಸುವುದೇ ಆಗಿದೆ. ಇದರ ಮೂಲಕ ಇತರ ಭಾಷಿಕರಿಗೆ ಇಲ್ಲದ ಸೌಲಭ್ಯ ಹಿಂದಿ ಭಾಷಿಕರಿಗೆ ಒದಗಿಸಲಾಗುತ್ತಿದೆ. ಇದು ಸಂವಿಧಾನದ ಸಮಾನತೆಯ ಆಶಯಗಳಿಗೆ ವಿರುದ್ಧವಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಆರೋಪಿಸಿದ್ದಾರೆ.

ಒಕ್ಕೂಟ ಸರಕಾರದ ನೇತೃತ್ವವನ್ನು ಯಾವುದೇ ರಾಜಕೀಯ ಪಕ್ಷ ಹಿಡಿದರೂ ಹಿಂದಿ ಹೇರಿಕೆಯನ್ನು ಎಗ್ಗಿಲ್ಲದೆ ನಡೆಸಲಾಗುತ್ತಿದೆ. ಕಳೆದ ಎರಡು ದಶಕಗಳಿಂದಲೂ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿವರ್ಷ ಹಿಂದಿ ದಿವಸ ಆಚರಣೆಯನ್ನು ವಿರೋಧಿಸುತ್ತಾ ಬಂದಿದೆ. ಭಾರತದ ಎಲ್ಲ ಭಾಷೆಗಳಿಗೂ ಸಮಾನ ಸ್ಥಾನಮಾನ ದೊರೆಯುವವರೆಗೆ ಈ ಪ್ರತಿರೋಧ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಎಲ್ಲ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸೆ.14ರಂದು ರಾಜ್ಯದಾದ್ಯಂತ ಎಲ್ಲ ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್‌ಗಳ ಮುಂಭಾಗದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿಭಿನ್ನ ರೀತಿಯ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ ಎಂದು ಟಿ.ಎ. ನಾರಾಯಣಗೌಡ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ