ಆ್ಯಪ್ನಗರ

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ : ಸರಕಾರಕ್ಕೆ ನೋಟಿಸ್‌

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರ ಚುನಾವಣೆಯನ್ನು ಒಂದು ವರ್ಷ ಮುಂದೂಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ವಿಕ ಸುದ್ದಿಲೋಕ 19 Jul 2017, 11:13 am
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರ ಚುನಾವಣೆಯನ್ನು ಒಂದು ವರ್ಷ ಮುಂದೂಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
Vijaya Karnataka Web karnataka film chamber of commerce
ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ : ಸರಕಾರಕ್ಕೆ ನೋಟಿಸ್‌


ನಿರ್ಮಾಪಕ ಭಾ.ಮಾ. ಹರೀಶ್‌ ಸಲ್ಲಿಸಿರುವ ಅರ್ಜಿ ಮಂಗಳವಾರ ನ್ಯಾ.ಅಶೋಕ್‌ ಬಿ. ಹಿಂಚಿಗೇರಿ ಅವರ ಪೀಠದ ಮುಂದೆ ಬಂದಿತು. ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಪೀಠ, ಸರಕಾರ, ಸಹಕಾರ ಇಲಾಖೆ ರಿಜಿಸ್ಟ್ರಾರ್‌ಗೆ ನೋಟಿಸ್‌ ಮತ್ತು ವಾಣಿಜ್ಯ ಮಂಡಳಿ ಗೌರವ ಕಾರ‍್ಯದರ್ಶಿಗೆ ತುರ್ತು ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು. ಸರಕಾರದ ಪರ ವಕೀಲರಾದ ಲಕ್ಷ್ಮೇನಾರಾಯಣ ಅವರು ನೋಟಿಸ್‌ ಸ್ವೀಕರಿಸಿದರು.

ಅರ್ಜಿದಾರರ ಪರ ವಕೀಲರು, ‘‘ನಿಗದಿಯಂತೆ 2017-18ನೇ ಸಾಲಿಗೆ ಜೂನ್‌ನÜಲ್ಲಿ ಮಂಡಳಿಯ ಅಧ್ಯಕ್ಷ ಸ್ಥಾನ ಸೇರಿದಂತೆ ಮೂರು ವಲಯಗಳಿಂದ 44 ಮಂದಿಯ ಆಯ್ಕೆಗೆ ಚುನಾವಣೆ ನಡೆಯಬೇಕಿತ್ತು. ಸಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಮನವಿಗೆ ಸ್ಪಂದಿಸದೆ ಜೂನ್‌ 16ರಂದು ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅಧ್ಯಕ್ಷರ ಚುನಾವಣೆಯನ್ನು ಒಂದು ವರ್ಷಗಳ ಕಾಲ ಮುಂದೂಡುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಶೀಘ್ರ ಚುನಾವಣೆ ನಡೆಸಬೇಕು. ಸದ್ಯಕ್ಕೆ ಮಂಡಳಿಗೆ ಆಡಳಿತಾಧಿಕಾರಿ ನೇಮಿಸಲು ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ