ಆ್ಯಪ್ನಗರ

ಡಿಜೆ ಹಳ್ಳಿ ಗಲಭೆ: ಬಿಎಸ್‌ವೈಗೆ ಡಿ.ಕೆ ಶಿವಕುಮಾರ್ ಬರೆದ ಪತ್ರದಲ್ಲೇನಿದೆ?

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಅಷ್ಟಕ್ಕೂ ಆ ಪತ್ರದಲ್ಲಿ ಏನಿದೆ ಎಂಬ ವಿವರ ಇಲ್ಲಿದೆ.

Vijaya Karnataka Web 16 Aug 2020, 11:11 am
ಬೆಂಗಳೂರು: ಡಿಜೆ ಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಹಿಂಸಾಚಾರ ಘಟನೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಹಾಗೂ ಅವರ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Vijaya Karnataka Web dks and bsy


ಮಂಗಳವಾರ ರಾತ್ರಿ ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್‌ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿ ಪ್ರಾಣಹಾನಿ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲದೆ ಬೆಂಕಿ ಹಚ್ಚಿ ಮನೆಯನ್ನು ಧ್ವಂಸ ಮಾಡಿದ್ದಾರೆ. ಇದರಿಂದ ಶಾಸಕರ ಕುಟುಂಬ ಆತಂಕದಲ್ಲಿದೆ. ಇದೊಂದು ಅಮಾನವೀಯ ಕೃತ್ಯ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು ಗಲಭೆ: ಮತ್ತೆ 35 ಮಂದಿಯ ಬಂಧನ, ಬಂಧಿತರ ಸಂಖ್ಯೆ 340ಕ್ಕೆ ಏರಿಕೆ..!

ಇಂತಹ ಘೋರ ಕೃತ್ಯ ನಡೆದರೂ ಸರ್ಕಾರದ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ನೆಪಮಾತ್ರಕ್ಕೆ ಭೇಟಿ ನೀಡಿ ಅನಾವಶ್ಯಕವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಖಂಡ ಶ್ರೀನಿವಾಸ ಮೂರ್ತಿಗೆ ರಕ್ಷಣೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಈ ಬಗ್ಗೆ ಪೊಲೀಸ್ ಇಲಾಖೆ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ.

'22 ಜಿಲ್ಲೆಗಳ ನೆರೆ ಸಂತ್ರಸ್ತರ ಪಾಲಿಗೆ ನಿಮ್ಮ ಸರ್ಕಾರ ಸತ್ತುಹೋಗಿದೆ': ಸಿದ್ದರಾಮಯ್ಯ

ಒಬ್ಬ ಶಾಸಕರಿಗೆ ಸರ್ಕಾರ ಭದ್ರತೆ ಒದಗಿಸಲು ವಿಫಲರಾದರೆ ಇನ್ನು ಸಾಮಾನ್ಯ ಜನರನ್ನು ಈ ಸರ್ಕಾರ ರಕ್ಷಿಸಲು ಸಾಧ್ಯವೇ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ. ಈ ನಿಟ್ಟಿನಲ್ಲಿ ಶಾಸಕರಿಗೆ ಹಾಗೂ ಅವರ ಕುಟುಂಬಕ್ಕೆ ಕೂಡಲೇ ಭದ್ರತೆ ನೀಡಬೇಕು ಎಂದು ಅವರು ಸಿಎಂ ಬಿಎಸ್‌ವೈಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ