ಆ್ಯಪ್ನಗರ

ಬೆಂಗಳೂರಿನಲ್ಲಿ ಖರ್ಗೆಯನ್ನ ಭೇಟಿಯಾದ ಡಿಕೆಶಿ, ರಾಜ್ಯ ರಾಜಕಾರಣದ ಬಗ್ಗೆ ಸುದೀರ್ಘ ಚರ್ಚೆ!

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ. ರಾಜ್ಯ ರಾಜಕಾರಣದ ಬಗ್ಗೆ ಇಬ್ಬರು ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ.

Vijaya Karnataka Web 16 Jun 2020, 4:27 pm
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಕೈ ಪಾಳಯದ ಪ್ರಬಲ ನಾಯಕ ಡಿ.ಕೆ. ಶಿವಕುಮಾರ್‌ ರಾಜ್ಯ ನಾಯಕರನ್ನ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಜೂ.16ರಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನ ಡಿಕೆಶಿ ಭೇಟಿಯಾಗಿದ್ದಾರೆ.
Vijaya Karnataka Web PTksXlSi


ಖರ್ಗೆಯವರ ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ಡಿಕೆಶಿ, ಭೇಟಿ ಮಾಡಿದ್ದಾರೆ. ಈ ವೇಳೆ ಉಭಯ ನಾಯಕರು ರಾಜ್ಯದ ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಟ್ವಿಟರ್‌ನಲ್ಲಿ ಸ್ವತಃ ಡಿಕೆಶಿಯವರೇ ಮಾಹಿತಿ ಹಂಚಿಕೊಂಡಿದ್ದು, ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.


ಕೆಪಿಸಿಸಿ ಸ್ಥಾನಕ್ಕೆ ಎಐಸಿಸಿ ಇತ್ತೀಚೆಗೆ ಕಾಂಗ್ರೆಸ್‌ನ ಪ್ರಬಲ ನಾಯಕ ಡಿ.ಕೆ. ಶಿವಕುಮಾರ್‌ ಅವರನ್ನ ಆಯ್ಕೆ ಮಾಡಿತ್ತು. ಪದಗ್ರಹಣಕ್ಕೆ ಕೆಲವು ಬಾರಿ ದಿನ ನಿಗದಿಯಾಗಿದ್ದರು ಕೊರೊನಾ ಹಿನ್ನೆಲೆ ಅವಕಾಶ ಸಿಕ್ಕಿರಲಿಲ್ಲ. ಇದೀಗ ಕಾರ್ಯಕ್ರಮಕ್ಕೆ ಅನುಮತಿ ಸಿಕ್ಕಿದ್ದು ಮುಂದಿನ ತಿಂಗಳು ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಡಿಕೆಶಿ ಎಲ್ಲಾ ಕಾಂಗ್ರೆಸ್‌ನ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ.

ಅಕಾಲಿಕ ಮರಣದ ಸುದ್ದಿ ಪ್ರಕಟಿಸುವಾಗ, ಬಿತ್ತರಿಸುವಾಗ ‘ವ್ಯಾಕರಣ’ ಹೇಗಿರಬೇಕು?


ಇನ್ನು ಇತ್ತೀಚೆಗೆ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೆಗೌಡ ಕೂಡ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ