ಆ್ಯಪ್ನಗರ

ರೈತ ಸಂಘಟನೆಗಳ ಪ್ರತಿಭಟನೆಗೆ ಡಿಕೆಶಿ ಬೆಂಬಲ: ಪ್ರೀಡಂ ಪಾರ್ಕ್‌ಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ!

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್, ರಾಜ್ಯ ಹಾಗೂ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಹರಿಹಾಯ್ದರು.

Vijaya Karnataka Web 22 Sep 2020, 6:42 pm
ಬೆಂಗಳೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಬಲ ಸೂಚಿಸಿದ್ದಾರೆ.
Vijaya Karnataka Web DK Shivkumar
ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಡಿಕೆ ಶಿವಕುಮಾರ್


ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್, ಪ್ರತಿಭಟನಾ ನಿರತ ವಿವಿಧ ರೈತ ಸಂಘಗಳ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ರೈತರ ಹೋರಾಟಕ್ಕೆ ಕೆಪಿಸಿಸಿ ಬೆಂಬಲವಾಗಿ ನಿಲ್ಲಲಿದ್ದು, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಜನರಿಗೆ ತಲುಪಿಸಲು ಶ್ರಮಿಸಲಿದೆ ಎಂದು ಈ ವೇಳೆ ಡಿಕೆಶಿ ರೈತ ನಾಯಕರಿಗೆ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ರಸ್ತೆಗಿಳಿದ ಅನ್ನದಾತರು, ಸಿಎಂ ಬಿಎಸ್‌ವೈಗೆ ಕೇಳುತ್ತಾ ರೈತರು ಕೂಗು?

ಕೇಂದ್ರ ಸರ್ಕಾರ ಕೃಷಿ ವಿಧೇಯಕದ ಮೂಲಕ ರೈತ ಸಮುದಾಯದ ಮೇಲೆ ದಾಳಿ ಮಾಡಲು ಸಜ್ಜಾಗಿದ್ದರೆ, ರಾಜ್ಯ ಸರ್ಕಾರ ಎಪಿಎಂಸಿ ತಿದ್ದುಪಡಿ ಕಾಯ್ದೆ ಮೂಲಕ ಕೃಷಿ ಕ್ಷೇತ್ರವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಡಿಕೆಶಿ ಈ ವೇಳೆ ಹರಿಹಾಯ್ದರು.

ರಾಜ್ಯ ಸರ್ಕಾರದ ಕೃಷಿ ನೀತಿಗಳನ್ನು ಖಂಡಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದ್ದು, ರಾಜ್ಯದ ರೈತ ಬಾಂಧವರೊಂದಿಗೆ ಕಾಂಗ್ರೆಸ್ ಗಟ್ಟಿಯಾಗಿ ನಿಲ್ಲಲಿದೆ ಎಂದು ಈ ವೇಳೆ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿದರು.

ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಡಿಕೆಶಿ, ಪ್ರತಿಭಟನೆಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.

‘ಈ ಬಾರಿಯ ಅಧಿವೇಶನದಲ್ಲಿ ಜನವಿರೋಧಿ ಬಿಲ್‌ಗಳು ಹೆಚ್ಚಾಗಿವೆ’; ಸಿದ್ದರಾಮಯ್ಯ

ಭೂ ಸುಧಾರಣೆ, ವಿದ್ಯುತ್ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರಾಜ್ಯದ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ