ಆ್ಯಪ್ನಗರ

ಬೆಂಗಳೂರು: ಮಹಿಳಾ ಸಿಐಡಿ ಡಿವೈಎಸ್‌ಪಿ ಆತ್ಮಹತ್ಯೆ; ಸಂಬಂಧಿಕರ ಮನೆಯಲ್ಲಿ ಸೂಸೈಡ್‌

ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅನ್ನಪೂರ್ಣೇಶ್ವರಿ ನಗರದ ಸಂಬಂಧಿಕರ ಮನೆಯಲ್ಲಿ ಸಿಐಡಿ ಡಿವೈಎಸ್‌ಪಿಯಾಗಿದ್ದ ಲಕ್ಷ್ಮೀ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Vijaya Karnataka Web 17 Dec 2020, 11:04 am
ಬೆಂಗಳೂರು: ಸಿಐಡಿ ವಿಭಾಗದ ಡಿವೈಎಸ್‌ಪಿ ಲಕ್ಷ್ಮೀ (33) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ತನಿಖೆ ಮುಂದುವರೆದಿದೆ.
Vijaya Karnataka Web LAKSHMI
ಸಿಐಡಿ ಡಿವೈಎಸ್‌ಪಿ ಲಕ್ಷ್ಮೀ


ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಸಂದರ್ಭದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಕೋಲಾರದ ಮಾಲೂರಿನವರಾಗಿರುವ ಲಕ್ಷ್ಮೀ ಕೋಣನಕುಂಟೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು.

ಲಕ್ಷ್ಮೀ ಅವರು 2014ರ ಬ್ಯಾಚ್‌ನ ಕೆಪಿಎಸ್‌ಸಿ ಅಧಿಕಾರಿಯಾಗಿದ್ದು, 2017ರಲ್ಲಿ ನೇಮಕವಾಗಿದ್ದ ಲಕ್ಷ್ಮೀ ಅವರು ಡಿವೈಎಸ್‌ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಅನ್ನಪೂರ್ಣೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣದ ದಾಖಲಿಸಿಕೊಂಡಿದ್ದಾರೆ.

₹10 ಕೋಟಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಗೆ ವಂಚನೆ..! ಆರೋಪಿ ಬಂಧನ..!

6 ತಿಂಗಳ ಹಿಂದೆ ಸಿಐಡಿ ಸ್ಟೇಷನ್‌ ಎನ್‌ಕ್ವೈರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ದೀರ್ಘಕಾಲ ಗೈರಾಗುತ್ತಿದ್ದರು ಎಂದು ಆಪ್ತಮೂಲಗಳು ತಿಳಿಸಿವೆ. ಬುಧವಾರ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ 200ಕ್ಕೂ ಹೆಚ್ಚು ಜನರಿಗೆ ಚೀಟಿ ಚೀಟಿಂಗ್..! ದಂಪತಿ ಅಂದರ್..

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ