ಆ್ಯಪ್ನಗರ

ಹುಟ್ಟಿದಾಗ ಜಾತಿ-ಜಾತಕ, ಸತ್ತಾಗ ಸೂತಕ..! ಜಾತಿ ರಾಜಕಾರಣ ಬಿಟ್ಟು ಅಭಿವೃದ್ಧಿ ಮಾತಾಡಿ ಎಂದ ಶರವಣ

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್‌ ಆರೋಪಿಸಿದೆ. ಈ ಕುರಿತು ಮಾತನಾಡಿದ ಟಿ.ಎ.ಶರವಣ ಹುಟ್ಟಿದಾಗ ಜಾತಿ-ಜಾತಕ, ಮಧ್ಯದಲ್ಲಿ ನಾಟಕ, ಸತ್ತಾಗ ಸೂತಕ ಎಂದು ಎಲ್ಲರಿಗೂ ಗೊತ್ತಿದೆ. ಜಾತಿ ಬಿಟ್ಟು, ಅಭಿವೃದ್ಧಿ ಬಗ್ಗೆ ಮಾತನಾಡಿ ಎಂದು ಕಿಡಿಕಾರಿದರು.

Vijaya Karnataka Web 26 Oct 2020, 5:49 pm
ಬೆಂಗಳೂರು: ಹುಟ್ಟಿದಾಗ ಜಾತಿ-ಜಾತಕ, ಮಧ್ಯದಲ್ಲಿ ನಾಟಕ, ಸತ್ತಾಗ ಸೂತಕ ಎಂದು ಎಲ್ಲರಿಗೂ ಗೊತ್ತಿದೆ. ಜಾತಿ ಬಿಟ್ಟು, ಅಭಿವೃದ್ಧಿ ಬಗ್ಗೆ ಮಾತನಾಡಿ. ಕಾಂಗ್ರೆಸ್ ನಾಯಕರು ಜಾತಿ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ. ಉಪಚುನಾವಣೆ ಗೆಲ್ಲಲು ಒಂದು ಕಡೆ ಜಾತಿ, ಇನ್ನೊಂದು ಕಡೆ ಅಧಿಕಾರ ಬಳಸಲಾಗುತ್ತಿದೆ ಎಂದು ಪರಿಷತ್‌ ಮಾಜಿ ಸದಸ್ಯ ಟಿ.ಎ.ಶರವಣ್‌ ಹೇಳಿದರು.
Vijaya Karnataka Web leave caste politics come with development says jds leader ta sharavana
ಹುಟ್ಟಿದಾಗ ಜಾತಿ-ಜಾತಕ, ಸತ್ತಾಗ ಸೂತಕ..! ಜಾತಿ ರಾಜಕಾರಣ ಬಿಟ್ಟು ಅಭಿವೃದ್ಧಿ ಮಾತಾಡಿ ಎಂದ ಶರವಣ


ನಗರದ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‌ಗಿಂತಲೂ ಇಂತಹ ನಾಯಕರು ಅಪಾಯಕಾರಿ. ಮತದಾರರಿಗೆ ಹಣ, ಹೆಂಡ ಹಂಚಿದ್ದಾಯಿತು, ಈಗ ಸೆಟ್‌ಟಾಪ್‌ ಬಾಕ್ಸ್‌ ನೀಡುತ್ತಿದ್ದಾರೆ. ಸರಕಾರ ಮ್ಯಾಚ್‌ ಫಿಕ್ಸಿಂಗ್‌ ರೀತಿ ವೋಟ್‌ ಫಿಕ್ಸಿಂಗ್‌ ಮಾಡಿರುವಂತೆ ಕಾಣುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣಾ ಅಕ್ರಮ ಎಸಗುತ್ತಿದ್ದರೂ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿ ಶಾಸಕ ಸ್ಥಾನ ಮಾರಾಟ ಮಾಡಿಕೊಂಡಿದ್ದಕ್ಕೆ ಉಪಚುನಾವಣೆ ಬಂದಿದೆ. ಆದರೆ, ಫೇಸ್‌ಬುಕ್‌ಗಳಲ್ಲಿ ನಮ್ಮ ಅಭ್ಯರ್ಥಿ ಮಾರಾಟವಾಗಿದ್ದಾರೆ ಎಂದು ಸುಳ್ಳುಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹಬ್ಬಿಸಲಾಗುತ್ತಿದೆ. ಈ ಮೂಲಕ ನಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಆರ್‌ಆರ್‌ ನಗರ ಗೆಲ್ಲಲು ಜೆಡಿಎಸ್‌ನಿಂದ ರಣತಂತ್ರ..! ಕಾರ್ಯಕರ್ತರ 50 ತಂಡ, 10 ಶಾಸಕರ ಉಸ್ತುವಾರಿ

'ಮಾರಾಟ ಆಗಿರುವುದು ನಾವಲ್ಲ, ಬಿಜೆಪಿ, ಕಾಂಗ್ರೆಸ್‌ನವರು'
ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮಾತನಾಡಿ, ಮಾರಾಟ ಆಗಿರುವುದು ನಾವಲ್ಲ, ಬಿಜೆಪಿ ಮತ್ತು ಕಾಂಗ್ರೆಸ್‌ನವರು. ನನ್ನ ಮೇಲೆ ಭಯ ಹುಟ್ಟಿರುವುದರಿಂದಲೇ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸುಖಾ ಸುಮ್ಮನೇ ವ್ಯಕ್ತಿಯ ತೇಜೋವಧೆ ಮಾಡುವುದು ಸರಿಯಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ನಮ್ಮ ನಾಯಕರು ಟಿಕೆಟ್ ಕೊಟ್ಟಿದ್ದೇ ತಪ್ಪಾ..? ಯುವಕರು ಬೆಳೆಯಬಾರದಾ..? ಎಂದು ಕಾಂಗ್ರೆಸ್‌, ಬಿಜೆಪಿ ನಾಯಕರನ್ನು ಪ್ರಶ್ನಿಸಿದರು. ಇನ್ನು, ಚುನಾವಣೆ ವೇಳೆ ಹನುಮಂತರಾಯಪ್ಪ ಅವರಿಗೆ ಒಕ್ಕಲಿಗರ ಮೇಲೆ ಪ್ರೀತಿ ಬಂದಿದೆ. ಜಾತಿ ಹೆಸರು ಹೇಳುವುದಕ್ಕಿಂತ ಮುಂಚೆ ಸಮಾಜಕ್ಕೆ ನೀವು ಏನು ಮಾಡಿದ್ದೀರಿ ಎಂಬುದನ್ನು ಹೇಳಬೇಕು ಎಂದರು.

ಆರ್‌ಆರ್‌ ನಗರ: 50-60 ಕೋಟಿ ರೂ.ಗೆ ಮುನಿರತ್ನ ಮಾರಾಟವಾಗಿದ್ದಾರೆ ಎಂದು ಕೃಷ್ಣಮೂರ್ತಿ ಕಿಡಿ

'ಕನಕಪುರದಿಂದ ಆರ್‌ಆರ್‌ ನಗರಕ್ಕೆ ಗೂಂಡಾಗಳು'
ಇನ್ನು, ಜೆಡಿಎಸ್‌ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌ ಮಾತನಾಡಿ, ಚುನಾವಣೆ ವೇಳೆ ಭೂತದ ಬಾಯಲ್ಲಿ ಭಗವದ್ಗೀತೆ ಬರುತ್ತಿದೆ. ಮುನಿರತ್ನಂ ನಾಯ್ಡು ಅವರನ್ನು ಬೆಳೆಸಿದ್ದು ಡಿಕೆ ಸಹೋದರರು. ಕನಕಪುರದಿಂದ ಗೂಂಡಾಗಳನ್ನು ಕರೆಸಿ ಮುನಿರತ್ನಂಗೆ ಬೆಂಬಲ ನೀಡಿದ್ದರು. ಆದರೆ, ಈಗ ಒಕ್ಕಲಿಗ ಕಾರ್ಡ್‌ನ್ನು ಚುನಾವಣೆಯಲ್ಲಿ ಬಳಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ದೇವೇಗೌಡರ ಕುಟುಂಬವನ್ನು ಖರೀದಿಸಲು ಆಗಲ್ಲ: ಕಾಂಗ್ರೆಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಕ್ರೈಂ ಬ್ರಾಂಚ್‌, ಚುನಾವಣಾ ಆಯೋಗಕ್ಕೆ ದೂರು
ಆರ್‌ಆರ್‌ ನಗರ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಕೆಂಪೇಗೌಡ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪೇಜ್‌ ವಿರುದ್ಧ ಸೈಬರ್ ಕ್ರೈಮ್, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಯಿತು. ಜೆಡಿಎಸ್ ಅಭ್ಯರ್ಥಿ 5 ಕೋಟಿ ರೂ.ಗೆ ಮಾರಾಟವಾಗಿದ್ದಾರೆ ಎಂದು ಪೇಜ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು. ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದ್ದು, ತಕ್ಷಣ ಕ್ರಮಕೈಗೊಳ್ಳುವಂತೆ ಜೆಡಿಎಸ್‌ ನಾಯಕರು ದೂರು ನೀಡಿದರು. ಈ ವೇಳೆ ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್‌ ಅಧ್ಯಕ್ಷ ಆರ್‌.ಕೇಶವ್‌ ಮೂರ್ತಿ ಸೇರಿ ಅನೇಕ ಮುಖಂಡರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ