ಆ್ಯಪ್ನಗರ

ಮೆಟ್ರೊ ನೌಕರರಿಂದ ಮಧ್ಯರಾತ್ರಿ ಪ್ರತಿಭಟನೆ

ವೇತನ ಪರಿಷ್ಕರಣೆ ಮಾಡಬೇಕೆಂದು ಒತ್ತಾಯಿಸಿ ಮೆಟ್ರೊ ನೌಕರರು ಗುರುವಾರ ರಾತ್ರಿ ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Vijaya Karnataka 12 Jan 2019, 5:00 am
ಬೆಂಗಳೂರು: ವೇತನ ಪರಿಷ್ಕರಣೆ ಮಾಡಬೇಕೆಂದು ಒತ್ತಾಯಿಸಿ ಮೆಟ್ರೊ ನೌಕರರು ಗುರುವಾರ ರಾತ್ರಿ ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
Vijaya Karnataka Web metro wokers midnight protest
ಮೆಟ್ರೊ ನೌಕರರಿಂದ ಮಧ್ಯರಾತ್ರಿ ಪ್ರತಿಭಟನೆ


ಬೈಯ್ಯಪ್ಪನಹಳ್ಳಿ ನಿಲ್ದಾಣದ ಮುಂಭಾಗ ರಾತ್ರಿ 2 ಗಂಟೆಗೆ ಸೇರಿದ ಸುಮಾರು 300 ನೌಕರರು ಕೇಂದ್ರದ 7ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಿಸಬೇಕು ಎಂದು ಆಗ್ರಹಿಸಿದರು. ಈ ಹಿಂದೆ ವೇತನ ಪರಿಷ್ಕರಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ವೇತನ ಪರಿಷ್ಕರಿಸುವ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂದು ಆರೋಪಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇಠ್‌ ಪ್ರತಿಭಟನೆ ನಿಲ್ಲಿಸುವಂತೆ ಕೋರಿದರು. ಎರಡು ಗಂಟೆಗಳ ವಾಗ್ವಾದದ ನಂತರ, ಜ.14 ರಂದು ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅಜಯ್‌ ಸೇಠ್‌ ಭರವಸೆ ನೀಡಿದರು. ಬಳಿಕ ನೌಕರರು ಪ್ರತಿಭಟನೆ ನಿಲ್ಲಿಸಿದರು.

ಈ ಕುರಿತು ಮಾತನಾಡಿದ ಬಿಎಂಆರ್‌ಸಿಎಲ್‌ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ, ''ವೇತನ ಪರಿಷ್ಕರಣೆಗೆ ಅಧಿಕಾರಿಗಳು ಒಂದು ತಿಂಗಳು ಕಾಲಾವಕಾಶ ಕೇಳಿದ್ದಾರೆ. ಸೋಮವಾರ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದ್ದಾರೆ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ