ಆ್ಯಪ್ನಗರ

Kempegowda Jayanti: ಬೆಂಗಳೂರು ನಿರ್ಮಾತೃ ಆಶಯ ಈಡೇರಿಸುತ್ತಿದ್ದಾರೆ ಮೋದಿ ಎಂದ ನಳಿನ್‍ ಕುಮಾರ್ ಕಟೀಲ್

​​ಸಾಮಾಜಿಕ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರನ್ನು ಮೋದಿಯವರು ಆಯ್ಕೆ ಮಾಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಭವ್ಯ ಕಾಶಿ, ದಿವ್ಯ ಕಾಶಿ ಯೋಜನೆಯನ್ನೂ ಅನುಷ್ಠಾನಕ್ಕೆ ತಂದಿದ್ದಾರೆ

Vijaya Karnataka Web 27 Jun 2022, 7:27 pm
ಬೆಂಗಳೂರು: ಜಗತ್ತಿನ ಇತಿಹಾಸದ ಪುಟದಲ್ಲಿ ಮೊದಲ ಸ್ಥಾನದಲ್ಲಿ ಕಾಣುವ ನಗರಗಳಲ್ಲಿ ಬೆಂಗಳೂರು ಕೂಡ ಒಂದು. ಜಗತ್ತು ಬೆಂಗಳೂರನ್ನು ಗುರುತಿಸಲು ಅಗತ್ಯವಾದ ಪರಿಕಲ್ಪನೆಯನ್ನು ಕೆಂಪೇಗೌಡರು ನೀಡಿದ್ದಾರೆ. ಪ್ರಜಾಪ್ರಭುತ್ವದ ಆಶಯದಲ್ಲಿ ಅವರು ಆಡಳಿತ ನಡೆಸಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
Vijaya Karnataka Web ನಳಿನ್‌ ಕುಮಾರ್‌ ಕಟೀಲ್‌
ನಳಿನ್‌ ಕುಮಾರ್‌ ಕಟೀಲ್‌


ಸೋಮವಾರ ಬೆಂಗಳೂರು ನಗರ ಬಿಜೆಪಿ ಕಾರ್ಯಾಲಯದಲ್ಲಿ ನಡೆದ “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಜಯಂತಿ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ನಳಿನ್, ಸಾಮಾಜಿಕ ನ್ಯಾಯದ ಚಿಂತನೆ ಅವರಲ್ಲಿತ್ತು. ಕುಡಿಯುವ ನೀರಿಗೆ ಅವರು ಆದ್ಯತೆ ನೀಡಿ ಹತ್ತಾರು ಕೆರೆಗಳನ್ನು ಅವರು ನಿರ್ಮಿಸಿದ್ದರು. ಹತ್ತಾರು ದೇವಸ್ಥಾನಗಳ ಪುನರ್ ನಿರ್ಮಾಣ ಮತ್ತು ಜೀರ್ಣೋದ್ಧಾರದ ಮೂಲಕ ಬೆಂಗಳೂರನ್ನು ಸಾಂಸ್ಕೃತಿಕ ನಗರವನ್ನಾಗಿ ಅವರು ಪರಿವರ್ತಿಸಿದ್ದರು ಎಂದರು.

Kempegowda Jayanti: ವಿಧಾನಸೌಧದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣ: ಸಿಎಂ ಬೊಮ್ಮಾಯಿ ಭರವಸೆ

ಕೆಂಪೇಗೌಡರ ಕನಸುಗಳನ್ನು ನಗರೋತ್ಥಾನದ ಮೂಲಕ ನರೇಂದ್ರ ಮೋದಿಯವರು ನನಸಾಗಿ ಮಾಡುತ್ತಿದ್ದಾರೆ. ಮನೆಮನೆಗೆ ಗಂಗೆ ಕೊಡುವ ಯೋಜನೆಯನ್ನು ಮೋದಿಯವರು ಈಡೇರಿಸುತ್ತಿದ್ದಾರೆ ಎಂದು ವಿವರಿಸಿದರು.

ಸಾಮಾಜಿಕ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರನ್ನು ಮೋದಿಯವರು ಆಯ್ಕೆ ಮಾಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಭವ್ಯ ಕಾಶಿ, ದಿವ್ಯ ಕಾಶಿ ಯೋಜನೆಯನ್ನೂ ಅನುಷ್ಠಾನಕ್ಕೆ ತಂದಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ಕನಸನ್ನು ದೇಶದೆಲ್ಲೆಡೆ ನರೇಂದ್ರ ಮೋದಿಯವರು ನನಸಾಗಿ ಮಾಡುತ್ತಿದ್ದಾರೆ. ಕೆಂಪೇಗೌಡರ ನೆನಪನ್ನು ಶಾಶ್ವತವಾಗಿ ಮಾಡಲು ದೊಡ್ಡ ವಿಗ್ರಹ ನಿರ್ಮಾಣಕ್ಕೆ ಮುಂದಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಳಿನ್‍ಕುಮಾರ್ ಕಟೀಲ್ ಅವರು ಅಭಿನಂದಿಸಿದರು.

ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ, ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜು ಗೌಡ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಬಿ.ನಾರಾಯಣ್, ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೆಂಪೇಗೌಡರು ಯಾರೊಬ್ಬರ ಸ್ವತ್ತಲ್ಲ, ಕುವೆಂಪು ಕಂಡ ಸರ್ವ ಜನಾಂಗದ ಸ್ವತ್ತು: ಮಾಜಿ ಸಿಎಂ ಎಸ್.ಎಂ. ಕೃಷ್ಣ

ರಾಜ್ಯ ಸರಕಾರದ ವತಿಯಿಂದ ಕೆಂಪೇಗೌಡ ಜಯಂತಿಯನ್ನು ಸೋಮವಾರ ಹಲವಾರು ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ಜನಪ್ರತಿನಿಧಿಗಳು, ಹಿರಿಯರು, ಗಣ್ಯರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ