ಆ್ಯಪ್ನಗರ

ಮಾಸ್ಕ್‌ ಧರಿಸದವರಿಗೆ 1000 ರೂ. ದಂಡ?

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಾಸ್ಕ್‌ ಹಾಕಿಕೊಳ್ಳದವರಿಗೆ ಸದ್ಯ 200 ರೂ. ದಂಡ ಹಾಕಲಾಗುತ್ತಿದೆ. ಆದಾಗ್ಯೂ, ಸಾರ್ವಜನಿಕರು ನಿಯಮ ಉಲ್ಲಂಘಿಸುತ್ತಿರುವುದು ಮುಂದುವರಿದಿದೆ. ಹೀಗಾಗಿ, ದಂಡದ ಮೊತ್ತವನ್ನು 1000 ರೂ. ಗಳಿಗೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ.

Vijaya Karnataka Web 29 Sep 2020, 11:49 pm
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದೆ ಅಡ್ಡಾಡುವವರಿಗೆ ವಿಧಿಸುತ್ತಿರುವ ದಂಡದ ಮೊತ್ತವನ್ನು ಒಂದು ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲು ಸರಕಾರ ಚಿಂತನೆ ನಡೆಸಿದೆ.
Vijaya Karnataka Web ಮಾಸ್ಕ್‌
ಮಾಸ್ಕ್‌


ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಾಸ್ಕ್‌ ಹಾಕಿಕೊಳ್ಳದವರಿಗೆ ಸದ್ಯ 200 ರೂ. ದಂಡ ಹಾಕಲಾಗುತ್ತಿದೆ. ಆದಾಗ್ಯೂ, ಸಾರ್ವಜನಿಕರು ನಿಯಮ ಉಲ್ಲಂಘಿಸುತ್ತಿರುವುದು ಮುಂದುವರಿದಿದೆ. ಹೀಗಾಗಿ, ದಂಡದ ಮೊತ್ತವನ್ನು 1000 ರೂ. ಗಳಿಗೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ.

''ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಸ್ಕ್‌ ಧರಿಸದವರಿಗೆ ವಿಧಿಸುತ್ತಿರುವ ದಂಡದ ಮೊತ್ತವನ್ನು ಒಂದು ಸಾವಿರ ರೂ. ಗಳಿಗೆ ಏರಿಕೆ ಮಾಡಲು ಚರ್ಚಿಸಲಾಯಿತು. ಈ ಬಗ್ಗೆ ಸರಕಾರವೇ ಸೂಕ್ತ ತೀರ್ಮಾನ ತೆಗೆದುಕೊಂಡು ಆದೇಶ ಹೊರಡಿಸಲಿದೆ. ನಗರದಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ನಿಯಂತ್ರಣ ಹೇರಬೇಕಿದೆ. ಮಾಸ್ಕ್‌ ಧರಿಸುವಂತೆ ಅರಿವು ಮೂಡಿಸಿದರೂ ಜನರು ನಿಯಮ ಉಲ್ಲಂಘಿಸುತ್ತಿದ್ದಾರೆ. ಹೀಗಾಗಿ, ದಂಡದ ಮೊತ್ತವನ್ನು ಜಾಸ್ತಿ ಮಾಡುವುದು ಅನಿವಾರ್ಯವಾಗಲಿದೆ'' ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ತಿಳಿಸಿದರು.

''ಪಾಲಿಕೆ ವ್ಯಾಪ್ತಿಯಲ್ಲಿ ಸದ್ಯ 198 ಮಂದಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ 120 ಮಂದಿಯನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಆನಂತರ ಮಾಸ್ಕ್‌ ಧರಿಸದಿರುವವರ ವಿರುದ್ಧದ ಕಾರ್ಯಾಚರಣೆ ತೀವ್ರಗೊಳಿಸಲಾಗುವುದು'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ