ಆ್ಯಪ್ನಗರ

ಬೆಂಗಳೂರಿನಲ್ಲಿ 3 ಲಕ್ಷ ಅಕ್ರಮ ವಲಸಿಗರಿರುವ ಮಾಹಿತಿ ಇದೆ, ಗಡಿಪಾರು ಮಾಡಲು ಕ್ರಮ: ಡಿಸಿಎಂ

ಬೆಂಗಳೂರಿನಲ್ಲಿ 3 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರಿರುವ ಮಾಹಿತಿ ಇದೆ. ಅವರನ್ನು ಪತ್ತೆ ಮಾಡಿ ಮುಲಾಜಿಲ್ಲದೆ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

Vijaya Karnataka Web 12 Jan 2020, 1:01 pm
ಬೆಂಗಳೂರು: ರಾಜ್ಯದಲ್ಲಿ ಯಾವುದೇ ದಾಖಲೆ ಇಲ್ಲದೆ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿ, ಮುಲಾಜಿಲ್ಲದೆ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ್‌ ತಿಳಿಸಿದರು.
Vijaya Karnataka Web ashwath narayan


ಬಿಳೇಕಹಳ್ಳಿ ಜನಜಾಗೃತಿ ಸಾಮಾಜಿಕ ಕಲಾ ಮತ್ತು ಸಾಂಸ್ಕೃತಿಕ ವೇದಿಕೆಯು ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ಛಾಯಾಗ್ರಾಹಕ ಸುಧೀರ್‌ ಶೆಟ್ಟಿ ಅವರ 'ರಾಜ್ಯದ ಅಕ್ರಮ ಹಾಗೂ ಸಕ್ರಮ ಬಾಂಗ್ಲಾ ವಲಸಿಗರ ಛಾಯಾಚಿತ್ರ ಪ್ರದರ್ಶನ' ಉದ್ಘಾಟಿಸಿ ಅವರು ಮಾತನಾಡಿದರು.

''ನಗರದಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ವಾಸ ಮಾಡುತ್ತಿರುವುದು ತಿಳಿದುಬಂದಿದೆ. ಇವರ ಬಳಿ ಸೂಕ್ತ ದಾಖಲಾತಿಗಳಿಲ್ಲದಿದ್ದರೆ, ಗಡಿಪಾರು ಮಾಡಲಾಗುವುದು. ಪೌರತ್ವ ತಿದ್ದುಪಡಿ ಕಾಯಿದೆಯಿಂದ ಅಕ್ರಮವಾಗಿ ನೆಲೆಸಿರುವವರನ್ನು ಪತ್ತೆ ಮಾಡಲು ಸಾಧ್ಯವಾಗಲಿದೆ. ಆದರೆ, ಇದರಿಂದ ಮೂಲ ಭಾರತೀಯ ನಿವಾಸಿಗಳಿಗೆ ಯಾವುದೇ ತೊಂದರೆ ಉಂಟಾಗದು,'' ಎಂದು ಆಶ್ವಾಸನೆ ನೀಡಿದರು.

''2014ಕ್ಕೂ ಮೊದಲೇ ಭಾರತಕ್ಕೆ ಬಂದು ವಾಸಿಸುತ್ತಿರುವವರಿಗೆ ಯಾವುದೇ ತೊಂದರೆಯಾಗದು. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ. ಪ್ರತಿಪಕ್ಷಗಳು ವಿನಾಕಾರಣ ಜನರಲ್ಲಿಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿವೆ. ಇದಕ್ಕೆಲ್ಲಾಜನರು ಮನ್ನಣೆ ನೀಡಬಾರದು,'' ಎಂದು ಹೇಳಿದರು.

''ಛಾಯಾಗ್ರಾಹಕ ಸುಧೀರ್‌ ಶೆಟ್ಟಿ ಅವರು ಬೆಂಗಳೂರು ರಾಜ್ಯಾದ್ಯಂತ ನೆಲೆಸಿರುವ ಅಕ್ರಮ ಬಾಂಗ್ಲಾವಲಸಿಗರ ನೈಜ ಚಿತ್ರಣವನ್ನು ಸೆರೆ ಹಿಡಿದು ಅನಾವರಣಗೊಳಿಸಿದ್ದಾರೆ. ಅವರು ನೆಲೆಸಿರುವ ಜೋಪಡಿಗಳು, ಕಾರ್ಯವೈಖರಿ, ಬೀದಿ ವ್ಯಾಪಾರ ಮಾಡುತ್ತಿರುವ ದೃಶ್ಯಾವಳಿಗಳನ್ನು ಸೆರೆ ಹಿಡಿದು ಮಾಹಿತಿ ಸಂಗ್ರಹಿಸುವ ಮೂಲಕ ಅತ್ಯುತ್ತಮ ಕೆಲಸ ಮಾಡಿದ್ದಾರೆ,'' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ