ಆ್ಯಪ್ನಗರ

ಬೆಂಗಳೂರಿನಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟ: ಯುವಕನಿಗೆ ಗಾಯ

ಅನುಮಾನಾಸ್ಪದ ವಸ್ತು ಸ್ಪೋಟಗೊಂಡ ವ್ಯಕ್ತಿ ಗಾಯಗೊಂಡ ಘಟನೆ ಬೆಂಗಳೂರಿನ ಕೊಡಗಲ್ಲಹಟ್ಟಿಯಲ್ಲಿ ನಡೆದಿದೆ.

Vijaya Karnataka 20 Sep 2019, 12:50 pm
ಬೆಂಗಳೂರು: ಅನುಮಾನಾಸ್ಪದ ವಸ್ತು ಸ್ಪೋಟಗೊಂಡ ಪರಿಣಾಮ ಯವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿಕ್ಕಜಾಲಹಳ್ಳಿ ಬಳಿಯ ಕೊಡಗಲ್ಲಹಟ್ಟಿಯಲ್ಲಿ ನಡೆದಿದೆ.
Vijaya Karnataka Web ಬೆಂಗಳೂರಿನಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟ


ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಪವನ್ ಕುಮಾರ್ ಎಂಬ ಯುವಕ ಗಾಯಗೊಂಡಿದ್ದಾನೆ. ಈತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅನುಮಾನಾಸ್ಪದ ವಸ್ತು ಸ್ಪೋಟಗೊಂಡ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಚಿಕ್ಕಜಾಲಹಳ್ಳಿ ಪೊಲೀಸರು ಸೇರಿದಂತೆ ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸ್ಪೋಟಕ್ಕೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಭೀಮಶಂಕರ್ ತಿಳಿಸಿದ್ದಾರೆ.

ಚಿಕ್ಕಜಾಲ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತದೆ. ಗಣಿಗಾರಿಕೆ ಉದ್ದೇಶಕ್ಕಾಗಿ ಕಲ್ಲುಬಂಡೆ ಹೊಡೆಯಲು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಲಾಗುತ್ತದೆ. ಮನೆಯಲ್ಲಿ ಆ ರೀತಿ ಸಂಗ್ರಹಿಸಿಡಲಾಗಿದ್ದ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ ಎಂದು ಸ್ಥಳೀಯರು ಶಂಕಿಸಿದ್ದಾರೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ