ಆ್ಯಪ್ನಗರ

ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವ ಪಡೆದ ನ್ಯಾಯಾಂಗ ಬಡಾವಣೆಯ ನಿವಾಸಿಗಳು

ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಹಾಗೂ ಕನ್ನಡ-ಕನ್ನಡಿಗ-ಕರ್ನಾಟಕದ ಹಿನ್ನೆಲೆಯಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ರೂಪಿಸುವ ಉದ್ದೇಶದೊಂದಿಗೆ ʻಕೋಟಿ ಸದಸ್ಯತ್ವ ಅಭಿಯಾನʼದ ಅಡಿಯಲ್ಲಿ ʻಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುʼ ಎನ್ನುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ರಾಜ್ಯಾದ್ಯಂತ ಗಣ್ಯರಿಂದ ಜನಸಾಮಾನ್ಯರವರೆಗೆ, ಬಡಾವಣೆಗಳಿಗೆ ಭೇಟಿ ನೀಡಿ ಪರಿಷತ್ತಿನ ಸದಸ್ಯತ್ವ ಪಡೆದುಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

Edited byಸಿನಾನ್\u200c ಇಂದಬೆಟ್ಟು | Vijaya Karnataka Web 29 Jun 2022, 8:22 pm
ಬೆಂಗಳೂರು: ಕನಕಪುರ ರಸ್ತೆಯ ನ್ಯಾಯಾಂಗ ಬಡಾವಣೆಯ 158 ನಿವಾಸಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವ ಪಡೆದುಕೊಂಡಿದ್ದಾರೆ.
Vijaya Karnataka Web kasapa


ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಹಾಗೂ ಕನ್ನಡ-ಕನ್ನಡಿಗ-ಕರ್ನಾಟಕದ ಹಿನ್ನೆಲೆಯಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ರೂಪಿಸುವ ಉದ್ದೇಶದೊಂದಿಗೆ ʻಕೋಟಿ ಸದಸ್ಯತ್ವ ಅಭಿಯಾನʼದ ಅಡಿಯಲ್ಲಿ ʻಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುʼ ಎನ್ನುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ರಾಜ್ಯಾದ್ಯಂತ ಗಣ್ಯರಿಂದ ಜನಸಾಮಾನ್ಯರವರೆಗೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರುಗಳ ಮನೆಗೆ, ಕಚೇರಿಗೆ, ಬಡಾವಣೆಗಳಿಗೆ ಭೇಟಿ ನೀಡಿ ಪರಿಷತ್ತಿನ ಸದಸ್ಯತ್ವ ಪಡೆದುಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಕಸಾಪ ಆಜೀವ ಸದಸ್ಯತ್ವ ಪಡೆದುಕೊಂಡ ಮಾಜಿ ಲೋಕಾಯುಕ್ತ ಶಿವಾರಾಜ್ ಪಾಟೀಲ!
ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಕನಕಪುರ ರಸ್ತೆಯ ನ್ಯಾಯಾಂಗ ಬಡಾವಣೆಗೆ ಭೇಟಿ ನೀಡಿದರು. ವಿಶ್ರಾಂತ ಜಿಲ್ಲಾ ನ್ಯಾಯಾಧಿಶರುಗಳಾದ ನ್ಯಾ. ಶ್ರೀ ಶಿವಲಿಂಗೇಗೌಡ ಹಾಗೂ ನ್ಯಾ. ಶ್ರೀ ಅಶ್ವತ್ಥನಾರಾಯಣ, ಕೆ.ಎಸ್. ಸೇರಿದಂತೆ ಬಡಾವಣೆಯ ೧೫೮ ಜನರು ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವ ಪಡೆದುಕೊಂಡಿದ್ದಾರೆ.

ಸದಸ್ಯತ್ವ ಪಡೆದು ಮಾತನಾಡಿದ, ವಿಶ್ರಾಂತ ಜಿಲ್ಲಾ ನ್ಯಾಯಾಧೀಶ ಶ್ರೀ ಶಿವಲಿಂಗೇಗೌಡ ಅವರು ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಸ್ಥೆ. 108 ವರ್ಷಗಳ ಇತಿಹಾಸ ಹೊಂದಿದ ಸಂಸ್ಥೆಯ ಆಜೀವ ಸದಸ್ಯತ್ವ ಪಡೆದ ಬಗ್ಗೆ ನನಗೆ ಹೆಮ್ಮೆ ಎನಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.

ಅಧಿಕಾರಿಗಳ ಭಾಷಾ ತಾರತಮ್ಯ ಸಲ್ಲದು : ತಕ್ಷಣವೇ ಸುತ್ತೋಲೆ ವಾಪಸ್ ಪಡೆಯಲು ಕ.ಸಾ.ಪ. ಆಗ್ರಹ
ವಿಶ್ರಾಂತ ಜಿಲ್ಲಾ ನ್ಯಾಯಾಧೀಶ ಶ್ರೀ ಅಶ್ವತ್ಥನಾರಾಯಣ ಕೆ.ಎಸ್. ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆ. ಕನ್ನಡಿಗರಾದವರೆಲ್ಲರೂ ಪರಿಷತ್ತಿನ ಭಾಗವಾಗಬೇಕು. ಕನ್ನಡ ಸಾಹಿತ್ಯ ಪರಿಷತ್ತಿನ ಚುಕ್ಕಾಣಿ ಹಿಡಿದ ನಾಡೋಜ ಡಾ. ಮಹೇಶ ಜೋಶಿ ಅವರ ಕ್ರಿಯಾಶೀಲ ಕಾರ್ಯಕ್ಕೆ ನಮ್ಮ ನ್ಯಾಯಾಂಗ ಬಡಾವಣೆಯಲ್ಲಿ ಸದ್ಯ 158 ಜನರು ಆಜೀವ ಸದಸ್ಯತ್ವ ಪಡೆದು ಕೊಂಡಿದ್ದಾರೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ