ಆ್ಯಪ್ನಗರ

ಡಿಜೆ ಹಳ್ಳಿ ಗಲಭೆ ಆರೋಪಿ ಸಂಪತ್‌ರಾಜ್‌ರನ್ನ ಸಿಸಿಬಿ ಕಚೇರಿಗೆ ಕರೆತಂದ ಅಧಿಕಾರಿಗಳು

ಸಿಸಿಬಿ ಪೊಲೀಸರು ಕೆಜೆಹಳ್ಳಿ ಗಲಭೆಯಲ್ಲಿ ಸಂಪತ್‌ ರಾಜ್ ಕೈವಾಡದ ಕುರಿತು ಮತ್ತು ನಾಪತ್ತೆಯಾದ ಬಗ್ಗೆ ನ್ಯಾಯಾಲಯದ ಮುಂದೆ ಮಾಹಿತಿ ನೀಡಬೇಕಿದೆ. ಇದಕ್ಕಾಗಿ ಅಧಿಕಾರಿಗಳು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಬಳಿಕ ಸಂಪತ್‌ರಾಜ್‌ರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಹತ್ತು ದಿನಗಳಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

Vijaya Karnataka Web 17 Nov 2020, 9:24 am
ಬೆಂಗಳೂರು: ಡಿಜೆಹಳ್ಳಿ ಕೆಜೆಹಳ್ಳಿ ಗಲಭೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪತ್‌ರಾಜ್‌ರನ್ನ ಪೊಲೀಸರು ನಿನ್ನೆ ಬಂಧಿಸಿದ್ದು, ಮಂಗಳವಾರ ಮುಂಜಾನೆ ಸಿಸಿಬಿ ಕಚೇರಿಗೆ ಕರೆ ತಂದಿದ್ದಾರೆ.
Vijaya Karnataka Web Sampathraj


ಪ್ರಕರಣದಲ್ಲಿ ಸಂಪತ್‌ರಾಜ್‌ ಕೈವಾಡ ಇರೋದು ಪಕ್ಕಾ ಆಗ್ತಿದ್ದಂತೆ ಪೊಲೀಸರು ಬಂಧನಕ್ಕೆ ಬಲೆಬೀಸಿದ್ದರು. ಹೀಗಾಗಿ ಕಳೆದ ಒಂದು ತಿಂಗಳಿಂದ ಪೊಲೀಸರಿಗೆ ಕಣ್ಣಾ ಮುಚ್ಚಾಲೆ ಆಟ ಆಡಿಸ್ತಿದ್ದ ಸಂಪತ್‌ರಾಜ್‌ ನಿನ್ನೆ ಪೊಲೀಸರು ಕೈಗೆ ತಗಲಾಕ್ಕೊಂಡಿದ್ದರು. ಸ್ನೇಹಿತನ ಮನೆಯಲ್ಲಿ ಸಂಪತ್‌ರಾಜ್‌ನನ್ನ ಬಂಧಿಸಿದ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದರು.

ಡಿಜೆ ಹಳ್ಳಿ ಗಲಭೆ ಕೇಸ್‌: ಕಳ್ಳ-ಪೊಲೀಸ್‌ ಆಡುತ್ತಿದ್ದ ಮಾಜಿ ಮೇಯರ್‌ ಸಂಪತ್‌ ರಾಜ್‌ 1 ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದು ಹೇಗೆ?

ಇಂದು ಬೆಳಗ್ಗೆ ಆರೋಪಿಯನ್ನು ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಕೂಡ ಕಚೇರಿಗೆ ಆಗಮಿಸಲಿದ್ದಾರೆ. ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಮಧ್ಯಾಹ್ನದ ಹೊತ್ತಿಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

ಡಿಜೆ ಹಳ್ಳಿ ಗಲಭೆ ಪ್ರಕರಣ: ಖಾಕಿ ಬಲೆಗೆ ಸಿಕ್ಕಿಬಿದ್ದ ಮಾಜಿ ಮೇಯರ್ ಸಂಪತ್ ರಾಜ್!

ನ್ಯಾಯಾಲಯದ ಮುಂದೆ ಸಿಸಿಬಿ ಪೊಲೀಸರು ಕೆಜೆಹಳ್ಳಿ ಗಲಭೆಯಲ್ಲಿ ಸಂಪತ್‌ ರಾಜ್ ಕೈವಾಡದ ಕುರಿತು ಮತ್ತು ನಾಪತ್ತೆಯಾದ ಬಗ್ಗೆ ಮಾಹಿತಿ ನೀಡಬೇಕಿದೆ. ಇದಕ್ಕಾಗಿ ಅಧಿಕಾರಿಗಳು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಬಳಿಕ ಸಂಪತ್‌ರಾಜ್‌ರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಹತ್ತು ದಿನಗಳಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ