ಆ್ಯಪ್ನಗರ

ಶಿಕ್ಷಕನಿಂದ ಶಾಲೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ

ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದರ ದೈಹಿಕ ಶಿಕ್ಷಣ ಶಿಕ್ಷಕನೊಬ್ಬ ಹನ್ನೆರಡು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

Vijaya Karnataka Web 22 Aug 2017, 5:15 pm
ಬೆಂಗಳೂರು: ನಗರದ ಪ್ರತಿಷ್ಠಿತ ಶಾಲೆಯೊಂದರ ದೈಹಿಕ ಶಿಕ್ಷಣ ಶಿಕ್ಷಕನೊಬ್ಬ ಹನ್ನೆರಡು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
Vijaya Karnataka Web pt teacher abuses 12 yr old girl
ಶಿಕ್ಷಕನಿಂದ ಶಾಲೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ


ಶಾಲೆಯ ಆಡಳಿತ ಮಂಡಳಿ ಆರೋಪಿ ಶಿಕ್ಷಕನನ್ನು ರಕ್ಷಿಸುವ ಪ್ರಯತ್ನ ನಡೆಸುತ್ತಿದೆ ಎಂದು ಬಾಲಕಿಯ ಪೋಷಕರು ದೂರಿದ್ದಾರೆ. ಬಾಲಕಿಯು ಬಟ್ಟೆ ಬದಲಿಸುವಾಗ ಮೈಯಲ್ಲಿ ಕಚ್ಚಿದ್ದ ಗುರುತು ಇರುವುದನ್ನು ಸೋದರಿ ಗಮನಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿಯ ತಾಯಿ ದೂರು ನೀಡಿದ್ದು,ಆರೋಪಿ ಶಿಕ್ಷಕನನ್ನು ಪೋಸ್ಕೊ ಕಾಯಿದೆಯಡಿ ಬಂಧಿಸಲಾಗಿದೆ.

ರೂಮ್‌ಗೆ ಕರೆದೊಯ್ದು ಕಿರುಕುಳ ನೀಡಿರುವ ಆರೋಪಿ ಈ ಬಗ್ಗೆ ಬಾಯಿಬಿಡದಂತೆ ಬೆದರಿಸಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ಈ ಬಗ್ಗೆ ಶಾಲೆಗೆ ಹೋಗಿ ವಿಚಾರಿಸಿದಾಗ ಇತರ ಶಿಕ್ಷಕರು ಆರೋಪಿ ವಿರುದ್ಧ ಮಾತನಾಡದಂತೆ ಬೆದರಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಕಿರುಕುಳ ನೀಡಿರುವುದು ದೃಢಪಟ್ಟಿದೆ ಎಂದು ಪೋಷಕರು ದೂರಿನಲ್ಲಿ ವಿವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ