ಆ್ಯಪ್ನಗರ

ಬೈಎಲೆಕ್ಷನ್: ಕುತೂಹಲ ಕೆರಳಿಸಿದ ಆರ್‌. ಆರ್‌ ನಗರ ವಿಧಾನಸಭಾ ಕ್ಷೇತ್ರದ ಕದನ

ನವೆಂಬರ್‌ 3 ರಂದು ಶಿರಾ ಹಾಗೂ ಆರ್‌. ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಈ ಪೈಕಿ ಆರ್‌. ಆರ್‌ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 29 Sep 2020, 3:28 pm
ಬೆಂಗಳೂರು: ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದ್ದು ಈ ಪೈಕಿ ರಾಜರಾಜೇಶ್ವರಿ ನಗರ( ಆರ್‌. ಆರ್‌ ನಗರ) ವಿಧಾನಸಭಾ ಕ್ಷೇತ್ರ ಎಲ್ಲರ ಕುತೂಹಲದ ಕೇಂದ್ರ ಬಿಂದುವಾಗಿದೆ. ಕಾರಣ ಕಾಂಗ್ರೆಸ್ ಶಾಸಕರಾಗಿದ್ದು ಬಳಿಕ ಆಪರೇಷನ್‌ ಕಮಲಕ್ಕೆ ಒಳಗಾಗಿ ಬಿಜೆಪಿಗೆ ಸೇರ್ಪಡೆಗೊಂಡು ಅನರ್ಹಗೊಂಡ ಮುನಿರತ್ನ ಕಾರಣಕ್ಕಾಗಿ.
Vijaya Karnataka Web Munirathna


2018 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮುನಿರತ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವನ್ನು ಸಾಧಿಸಿದ್ದರು. ಆದರೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಎದುರಾಳಿ ಬಿಜೆಪಿ ಅಭ್ಯರ್ಥಿ ಮುನಿರಾಜು ಗೌಡ ಎರಡು ಅರ್ಜಿಗಳನ್ನು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದಾರೆ. ಇದು ನ್ಯಾಯಾಲಯದ ವಿಚಾರಣೆಯಲ್ಲಿ ಇರುವ ಸಂದರ್ಭದಲ್ಲೇ ಆಪರೇಷನ್‌ ಕಮಲಕ್ಕೆ ಒಳಗಾದ ಮುನಿರತ್ನ ಬಿಜೆಪಿಗೆ ಸೇರ್ಪಡೆಗೊಂಡರು.

ಶಿರಾ , ಆರ್‌.ಆರ್‌ ನಗರ ಬೈ ಎಲೆಕ್ಷನ್ ಫಿಕ್ಸ್: ಗರಿಗೆದರಿದ ರಾಜಕೀಯ ಚಟುವಟಿಕೆ

ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಸ್ಪೀಕರ್‌ ರಮೇಶ್ ಕುಮಾರ್ ಇತರ ಶಾಸಕರನ್ನು ಒಳಗೊಂಡಂತೆ ಇವರನ್ನು ಕೂಡಾ ಅನರ್ಹ ಮಾಡಿದರು. ಆದರೆ 2018 ಚುನಾವಣಾ ಅಕ್ರಮ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕಾರಣದಿಂದಾಗಿ ಉಪಚುನಾವಣೆ ನಡೆದಿರಲಿಲ್ಲ.

ಇದೀಗ ಉಪಚುನಾವಣೆ ಘೋಷಣೆಗೊಂಡಿದ್ದು ಬಿಜೆಪಿಯಿಂದ ಮುನಿರತ್ನ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುವುದು ಇನ್ನೂ ಅಧಿಕೃತಗೊಂಡಿಲ್ಲ. ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಗೌಡ ನಿಲುವು ಏನು ಎಂಬುವುದು ಕೂಡಾ ಕುತೂಹಲಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ