ಆ್ಯಪ್ನಗರ

ಸಂಪುಟ ವಿಸ್ತರಣೆ: ರಾಮಲಿಂಗ ರೆಡ್ಡಿಗೆ ಒಲಿದ ಗೃಹ ಖಾತೆ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅಂತಿಮ ಸುತ್ತಿನ ಸಂಪುಟ ವಿಸ್ತರಣೆ ನಡೆದಿದ್ದು, ಸಾರಿಗೆ ಸಚಿವರಾಗಿದ್ದ ಸಚಿವ ರಾಮಲಿಂಗಾರೆಡ್ಡಿ ಗೃಹ ಖಾತೆಯನ್ನು ವಹಿಸಿಕೊಂಡಿದ್ದಾರೆ.

Vijaya Karnataka 1 Sep 2017, 7:22 pm
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅಂತಿಮ ಸುತ್ತಿನ ಸಂಪುಟ ವಿಸ್ತರಣೆ ನಡೆದಿದ್ದು, ಸಾರಿಗೆ ಸಚಿವರಾಗಿದ್ದ ಸಚಿವ ರಾಮಲಿಂಗಾರೆಡ್ಡಿ ಗೃಹ ಖಾತೆಯನ್ನು ವಹಿಸಿಕೊಂಡಿದ್ದಾರೆ.
Vijaya Karnataka Web ramalinga reddy serve as home minister of karnataka
ಸಂಪುಟ ವಿಸ್ತರಣೆ: ರಾಮಲಿಂಗ ರೆಡ್ಡಿಗೆ ಒಲಿದ ಗೃಹ ಖಾತೆ


ನೂತನವಾಗಿ ಸಂಪುಟಕ್ಕೆ ಸೇರ್ಪಡೆಗೊಂಡ ಎಚ್.ಎಂ.ರೇವಣ್ಣ ಅವರಿಗೆ ಸಾರಿಗೆ, ಆರ್.ಬಿ.ತಿಮ್ಮಾಪೂರ್ ಅವರಿಗೆ ಅಬಕಾರಿ, ಗೀತಾ ಮಹದೇವ ಪ್ರಸಾದ್ ಅವರಿಗೆ ಸಕ್ಕರೆ, ಸಣ್ಣ ಕೈಗಾರಿಕೆ ರಾಜ್ಯ ಖಾತೆ ಜವಾಬ್ದಾರಿಯನ್ನು ನೀಡಲಾಗಿದೆ.

ಈ ಹಿಂದೆ ಸಣ್ಣ ಕೈಗಾರಿಕಾ ಸಚಿವರಾಗಿದ್ದ ರಮೇಶ್ ಜಾರಕಿಹೊಳಿಗೆ ಸಹಕಾರ ಖಾತೆಯನ್ನು ನೀಡಲಾಗಿದೆ. ಸಂತೋಷ್ ಲಾಡ್ ಅವರಿಗೆ ಕಾರ್ಮಿಕ ಖಾತೆ ಜತೆಗೆ ಕೌಶಲ್ಯ ಅಭಿವೃದ್ಧಿಯನ್ನು ನೀಡಲಾಗಿದೆ.

ಪ್ರಿಯಾಂಕ ಖರ್ಗೆ, ಪ್ರಮೋದ್ ಮಧ್ವರಾಜ್, ಈಶ್ವರ ಖಂಡ್ರೆ, ರುದ್ರಪ್ಪ ಲಮಾಣಿ ಅವರಿಗೆ ರಾಜ್ಯ ಸಚಿವ ಸ್ಥಾನದಿಂದ ಸಂಪುಟ ದರ್ಜೆಗೆ ಬಡ್ತಿ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ