ಆ್ಯಪ್ನಗರ

ಜಯನಗರ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ನಿಗದಿಗೆ ಮನವಿ

ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಹೊಸದಾಗಿ ದಿನಾಂಕವನ್ನು ನಿಗದಿ ಮಾಡಬೇಕೆಂದು ಪಕ್ಷೇತರ ಅಭ್ಯರ್ಥಿ ರವಿ ಕೃಷ್ಣಾರೆಡ್ದಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

Vijaya Karnataka 11 May 2018, 10:11 am
ಬೆಂಗಳೂರು: ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಹೊಸದಾಗಿ ದಿನಾಂಕವನ್ನು ನಿಗದಿ ಮಾಡಬೇಕೆಂದು ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ದಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
Vijaya Karnataka Web ec


ಬಿಜೆಪಿ ಅಭ್ಯರ್ಥಿ ಬಿ.ಎನ್‌.ವಿಜಯಕುಮಾರ್‌ ನಿಧನದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿತ್ತು. ಆದರೆ, ಇದುವರೆವಿಗೂ ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ದಿನಾಂಕವನ್ನು ಹೊಸದಾಗಿ ಘೋಷಿಸಿಲ್ಲ. ಕೇಂದ್ರ ಚುನಾವಣಾ ಆಯೋಗವು ಹೊಸ ಚುನಾವಣಾ ದಿನಾಂಕ ಪ್ರಕಟಿಸದೆ, ಯಾವುದೇ ಪ್ರಕ್ರಿಯೆ ಮುಂದು ಹೋಗುವುದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಪಕ್ಷೇತರ ಅಭ್ಯರ್ಥಿಗಳು ತಮ್ಮ ಬಹುತೇಕ ಸಂಪನ್ಮೂಲ ವ್ಯಯಿಸಿರುತ್ತಾರೆ ಮತ್ತು ಚುನಾವಣಾ ವೆಚ್ಚದ ಮಿತಿಯು 28 ಲಕ್ಷ ರೂಪಾಯಿಗಳಿದ್ದು, ಈಗಾಗಲೇ ಮಾಡಿರುವ ವೆಚ್ಚವು ಅದರಲ್ಲಿ ಸೇರುತ್ತದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಯಾವುದೇ ಸ್ಪಷ್ಟತೆ ಇರುವುದಿಲ್ಲ. ಈ ಎಲ್ಲಾ ಸಂದೇಹಗಳಿಗೆ ಸ್ಪಷ್ಟತೆ ನೀಡಬೇಕು ಮತ್ತು ಶೀಘ್ರವಾಗಿ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ಪ್ರಕಟಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ