ಆ್ಯಪ್ನಗರ

ಎದೆ ನೋವೆಂದು ಜಯದೇವ ಆಸ್ಪತ್ರೆಗೆ ದಾಖಲಾದ ರೋಷನ್‌ ಬೇಗ್‌!

ಐಎಂಎ ಹಗರಣದ ಸಂಬಂಧ ಜೈಲು ಸೇರಿರುವ ಮಾಜಿ ಸಚಿವ ಆರ್‌. ರೋಷನ್‌ ಬೇಗ್‌ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಷನ್‌ ಬೇಗ್‌ ಅವರನ್ನು ವಿಶೇಷ ನ್ಯಾಯಾಲಯ ಸಿಬಿಐ ವಶಕ್ಕೆ ನೀಡಲು ಆದೇಶಿಸಿತ್ತು

Vijaya Karnataka Web 26 Nov 2020, 11:33 pm
ಬೆಂಗಳೂರು: ಐಎಂಎ ಹಗರಣದ ಸಂಬಂಧ ಜೈಲು ಸೇರಿರುವ ಮಾಜಿ ಸಚಿವ ಆರ್‌. ರೋಷನ್‌ ಬೇಗ್‌ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
Vijaya Karnataka Web roshan baig


ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್‌ ಬೇಗ್‌ ಅವರನ್ನು ವಿಶೇಷ ನ್ಯಾಯಾಲಯ ಸಿಬಿಐ ವಶಕ್ಕೆ ನೀಡಲು ಆದೇಶಿಸಿತ್ತು. ಸಿಬಿಐ ಅಧಿಕಾರಿಗಳು ಕೋರ್ಟ್‌ ಆದೇಶದ ಪ್ರತಿ ಹಿಡಿದು ಪರಪ್ಪನ ಅಗ್ರಹಾರ ಜೈಲು ಬಳಿಗೆ ಬರುವಷ್ಟರಲ್ಲಿರೋಷನ್‌ ಬೇಗ್‌ ಅವರನ್ನು ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ರೋಷನ್‌ ಬೇಗ್‌ ಅವರು ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಐಎಂಎ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ, ರೋಷನ್ ಬೇಗ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಹಗರಣದ ಹೆಚ್ಚಿನ ವಿಚಾರಣೆಗಾಗಿ ಬೇಗ್ ಅವರನ್ನು ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಬುಧವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಸಿಬಿಐ ಮನವಿಗೆ ಅನುಮೋದನೆ ನೀಡಿತ್ತು. ನವೆಂಬರ್ 28ರವರೆಗೂ ಬೇಗ್ ಅವರನ್ನು ವಿಚಾರಣೆಗೆ ಒಳಪಡಿಸಿ, ಅಂದು ಬೆಳಿಗ್ಗೆ 11 ಗಂಟೆಗೆ ಹಾಜರುಪಡಿಸುವಂತೆ ಸೂಚಿಸಿತ್ತು.

ಐಎಂಎ ಹಗರಣ: ರೋಷನ್ ಬೇಗ್ ಕುಟುಂಬಸ್ಥರಿಗೆ ಸಿಬಿಐ ಶಾಕ್..! ಬೆಂಗಳೂರು ನಿವಾಸದ ಮೇಲೆ ದಾಳಿ..

ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಮನ್ಸೂರ್ ಖಾನ್‌ನಿಂದ ಸುಮಾರು 200 ಕೋಟಿ ರೂ. ಗೂ ಹೆಚ್ಚು ಹಣವನ್ನು ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ. ಹಣವಷ್ಟೇ ಅಲ್ಲ, ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್‌ ಬೇಗ್‌ಗೆ ಹಿನ್ನಡೆ..!

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯಾದ ಕೂಡಲೇ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಶಿವಾಜಿನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಷನ್ ಬೇಗ್, ಬಿಜೆಪಿ ಸೇರ್ಪಡೆಯಾಗಲು ಮುಂದಾಗಿದ್ದರು. ಸಿಬಿಐ ತನಿಖೆಯಿಂದ ಪಾರಾಗುವ ಕಾರಣಕ್ಕಾಗಿಯೇ ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಆದ್ರೆ, ಶಿವಾಜಿ ನಗರ ಉಪ ಚುನಾವಣೆ ವೇಳೆ ಅವರು ಬಿಜೆಪಿ ಸೇರಲು ಸಾಧ್ಯವಾಗಲಿಲ್ಲ. ಇತ್ತ ಜೆಡಿಎಸ್ ಕೂಡಾ ರೋಷನ್ ಬೇಗ್ ನೆರವಿಗೆ ನಿಲ್ಲಲಿಲ್ಲ. ಹೀಗಾಗಿ, ರೋಷನ್ ಬೇಗ್ ಸದ್ಯ ರಾಜಕೀಯವಾಗಿ ಅತಂತ್ರರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ