ಆ್ಯಪ್ನಗರ

RR ನಗರ ಬೈ ಎಲೆಕ್ಷನ್‌: ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಕೋವಿಡ್‌ ನಿಯಮ ಉಲ್ಲಂಘನೆ ಹಿನ್ನೆಲೆ ಕೇಸ್‌ ದಾಖಲು!

ಕೋವಿಡ್‌ ನಿಯಮಾವಳಿಯಂತೆ ಚುನಾವಣಾ ರ‍್ಯಾಲಿಯಲ್ಲಿ 50ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಯಶವಂತಪುರ ರೈಲು ನಿಲ್ದಾಣದ ಬಳಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪರವಾಗಿ ನಡೆಸುತ್ತಿದ್ದ ರೋಡ್‌ಶೋ ನಲ್ಲಿ 500ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ ಫ್ಲೈಯಿಂಗ್‌ ಸ್ಕ್ವಾಡ್ ತಂಡವು ಯಶವಂತಪುರ ಪೊಲೀಸ್‌ ಠಾಣೆಗೆ ದೂರು ನೀಡಿದೆ.

Vijaya Karnataka 31 Oct 2020, 7:13 am
ಬೆಂಗಳೂರು: ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ನಿಗದಿಗಿಂತ ಹೆಚ್ಚಿನ ಕಾರ್ಯಕರ್ತರೊಂದಿಗೆ ಪ್ರಚಾರ ರ‍್ಯಾಲಿ ನಡೆಸಿ ಕೋವಿಡ್‌ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಬಿಜೆಪಿ ಮತ್ತು ಕಾಂಗ್ರೆಸ್‌ ವಿರುದ್ಧ ಚುನಾವಣಾ ಸಿಬ್ಬಂದಿಯು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ.
Vijaya Karnataka Web congress bjp


ಕೋವಿಡ್‌ ನಿಯಮಾವಳಿಯಂತೆ ಚುನಾವಣಾ ರ‍್ಯಾಲಿಯಲ್ಲಿ 50ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಯಶವಂತಪುರ ರೈಲು ನಿಲ್ದಾಣದ ಬಳಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪರವಾಗಿ ನಡೆಸುತ್ತಿದ್ದ ರೋಡ್‌ಶೋ ನಲ್ಲಿ 500ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ ಫ್ಲೈಯಿಂಗ್‌ ಸ್ಕ್ವಾಡ್ ತಂಡವು ಯಶವಂತಪುರ ಪೊಲೀಸ್‌ ಠಾಣೆಗೆ ದೂರು ನೀಡಿದೆ. ಹಾಗೆಯೇ, ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ನಡೆದ ಚುನಾವಣಾ ರ‍್ಯಾಲಿಯಲ್ಲೂ ಅಧಿಕ ಮಂದಿ ಭಾಗವಹಿಸಿದ್ದರಿಂದ ಜಾಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಉಪ ಚುನಾವಣೆಯ ಪ್ರಚಾರದ ವೇಳೆ ಮಾಸ್ಕ್‌ ಧರಿಸದಿರುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿಯು ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ಹೆಚ್ಚುವರಿ ಮಾರ್ಷಲ್‌ಗಳನ್ನು ನಿಯೋಜಿಸಿದೆ. ಸದ್ಯ ಕ್ಷೇತ್ರದ 9 ವಾರ್ಡ್‌ಗಳಲ್ಲಿನ ತಲಾ ಒಬ್ಬರು ಮಾರ್ಷಲ್‌, ಇಂದಿರಾ ಕ್ಯಾಂಟೀನ್‌ ಬಳಿ ಭದ್ರತೆಗಾಗಿ ನೇಮಕಗೊಂಡಿರುವ ಮಾರ್ಷಲ್‌ಗಳೊಂದಿಗೆ ಹೆಚ್ಚುವರಿಯಾಗಿ 12 ಮಂದಿ ಮಾರ್ಷಲ್‌ಗಳು, 8 ಮಾರ್ಷಲ್‌ಗಧಿಳ ಗಸ್ತು ಪಡೆಗಳನ್ನು ನಿಯೋಜನೆ ಮಾಡಲಾಗಿದೆ.

ಮಹಿಳೆಯರಿಗೆ ಅವಕಾಶ ಸಿಗೋದೆ ಕಡಿಮೆ, ಆದರೆ ಕಾಂಗ್ರೆಸ್ ನನಗೆ ಅವಕಾಶ ನೀಡಿದೆ: ಕುಸುಮಾ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ