ಆ್ಯಪ್ನಗರ

‘ಆರ್‌ಆರ್‌ನಗರ ಕ್ಷೇತ್ರ ಚುನಾವಣೆಯಲ್ಲಿ ಒಳಒಪ್ಪಂದ ಆಗಿಲ್ಲ ’

ರಾಜರಾಜೇಶ್ವರಿನಗರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ ಎಂಬ ಮಾತು ಸುಳ್ಳು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ವೇಲು ನಾಯಕರ್‌ ತಿಳಿಸಿದರು.

Vijaya Karnataka 24 May 2018, 5:00 am
ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ ಎಂಬ ಮಾತು ಸುಳ್ಳು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ವೇಲು ನಾಯಕರ್‌ ತಿಳಿಸಿದರು.
Vijaya Karnataka Web rr nagar is not in the field of elections
‘ಆರ್‌ಆರ್‌ನಗರ ಕ್ಷೇತ್ರ ಚುನಾವಣೆಯಲ್ಲಿ ಒಳಒಪ್ಪಂದ ಆಗಿಲ್ಲ ’


ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ''ಆ ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವು ಸಾಧಿಸಿದರೆ ಅದಕ್ಕೆ ಕಾಂಗ್ರೆಸ್‌ ಸಹಕಾರ ನೀಡಲಿದೆ ಎಂಬುದು ಸುಳ್ಳು. ಇಂತಹ ಊಹಾಪೋಹಗಳಿಗೆ ಸಾರ್ವಜನಿಕರು ಕಿವಿಗೊಡಬಾರದು,''ಎಂದು ಮನವಿ ಮಾಡಿದರು.

ಆ ಕ್ಷೇತ್ರದಲ್ಲಿ ಮಾಜಿ ಶಾಸಕ ಮುನಿರತ್ನ ಅವರು ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ. ಈ ಕ್ಷೇತ್ರದ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಲಕ್ಷಾಂತರ ರೂ. ಖರ್ಚು ಮಾಡಿ, ಬೇರೆ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವುದು ಸಾಧ್ಯವಿಲ್ಲ,'' ಎಂದರು.

''ನಮ್ಮ ಪಕ್ಷದ ಮುಖಂಡರಲ್ಲಿ ಭಿನ್ನಾಭಿಪ್ರಾಯವಿಲ್ಲ. ಪಾಲಿಕೆ ಸದಸ್ಯರಾದ ಜಿ.ಮೋಹನ್‌ಕುಮಾರ್‌, ಶ್ರೀನಿವಾಸಮೂರ್ತಿ ಎಲ್ಲರೂ ಒಗ್ಗಟ್ಟಿನಿಂದ ಶಾಸಕ ಮುನಿರತ್ನರ ಗೆಲುವಿಗೆ ಶ್ರಮಿಸಲಿದ್ದಾರೆ. ಎಚ್‌ಎಂಟಿ ವಾರ್ಡ್‌ ಕಾಂಗ್ರೆಸ್‌ ಪಾಲಿಕೆ ಸದಸ್ಯೆ ಆಶಾ ಸುರೇಶ್‌ ಅವರ ಜತೆ ಹೈಕಮಾಂಡ್‌ ಮಾತುಕತೆ ನಡೆಸಿದ್ದು, ಅವರು ಕಾಂಗ್ರೆಸ್‌ ಪಕ್ಷದ ಪರ ಪ್ರಚಾರ ಕೈಗೊಳ್ಳಲಿದ್ದಾರೆ,'' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ