ಆ್ಯಪ್ನಗರ

ಎಲೆಕ್ಟ್ರಾನಿಕ್‌ ಸಿಟಿ ಚೆಕ್‌ಪೋಸ್ಟ್‌ ಬಳಿ 15 ಲಕ್ಷ ರೂ. ಜಪ್ತಿ

ಎಲೆಕ್ಟ್ರಾನಿಕ್‌ ಸಿಟಿ ಚೆಕ್‌ಪೋಸ್ಟ್‌ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 15 ಲಕ್ಷ ರೂ.ಯನ್ನು ಚುನಾವಣೆ ಕರ್ತವ್ಯದಲ್ಲಿದ್ದ ಸಂಚಾರ ದಳದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

Vijaya Karnataka 13 Apr 2018, 5:00 am
ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಚೆಕ್‌ಪೋಸ್ಟ್‌ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 15 ಲಕ್ಷ ರೂ.ಯನ್ನು ಚುನಾವಣೆ ಕರ್ತವ್ಯದಲ್ಲಿದ್ದ ಸಂಚಾರ ದಳದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
Vijaya Karnataka Web rs 15 lakh near electronic city checkpoint confiscation
ಎಲೆಕ್ಟ್ರಾನಿಕ್‌ ಸಿಟಿ ಚೆಕ್‌ಪೋಸ್ಟ್‌ ಬಳಿ 15 ಲಕ್ಷ ರೂ. ಜಪ್ತಿ


ಬುಧವಾರ ಉದ್ಯಮಿ ಭಗವಾನ್‌ ಎಂಬುವರು ತಮ್ಮ ಕಾರಿನಲ್ಲಿ ಹಣ ಸಾಗಿಸುತ್ತಿದ್ದರು. ಚೆಕ್‌ಪೋಸ್ಟ್‌ ಬಳಿ ಸಂಚಾರ ದಳದ ಅಧಿಕಾರಿಗಳು ಭಗವಾನ್‌ ಅವರ ಕಾರು ತಡೆದು ತಪಾಸಣೆ ನಡೆಸಿದಾಗ 15 ಲಕ್ಷ ರೂ. ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ವಿಚಾರಣೆ ವೇಳೆ ತನ್ನ ವ್ಯವಹಾರಕ್ಕೆ ಸೇರಿದ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೆ ಎಂದು ಉದ್ಯಮಿ ತಿಳಿಸಿದ್ದಾರೆ. ಗುರುವಾರ ತಮ್ಮ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಂದಿದ್ದರು. ಆದರೆ, ನ್ಯಾಯಾಲಯಕ್ಕೆ ಸೂಕ್ತ ದಾಖಲೆಗಳನ್ನು ನೀಡಿ ಹಣವನ್ನು ಬಿಡಿಸಿಕೊಳ್ಳಬೇಕಾಗುತ್ತದೆ. ಈ ಕುರಿತು ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್‌ ಸಿಟಿ ಠಾಣೆ ಪೊಲೀಸರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ