ಆ್ಯಪ್ನಗರ

ಆರ್‌ಆರ್‌ ನಗರ ಬೈಎಲೆಕ್ಷನ್: ನವೆಂಬರ್ 1 ರಿಂದ ನಿಷೇಧಾಜ್ಞೆ ಜಾರಿ, ಮದ್ಯ ಮಾರಾಟಕ್ಕೂ ಇಲ್ಲ ಅನುಮತಿ

ಆರ್ ಆರ್‌ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ನವೆಂಬರ್‌ 1 ರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಷ್ಟೇ ಅಲ್ಲದೆ ಮದ್ಯ ಮಾರಾಟಕ್ಕೂ ಅನುಮತಿ ನಿರಾಕರಿಸಲಾಗಿದೆ.

Vijaya Karnataka Web 29 Oct 2020, 5:12 pm
ಬೆಂಗಳೂರು: ನವೆಂಬರ್‌ 3 ರಂದು ನಡೆಯಲಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.
Vijaya Karnataka Web r r nagara


ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು ನವೆಂಬರ್ 1 ಸಂಜೆ 6 ಗಂಟೆಯಿಂದ ನವೆಂಬರ್ 4 ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸುವುದು ಹಾಗೂ ಗುಂಪು ಸೇರಲು ಅವಕಾಶ ಇರುವುದಿಲ್ಲ.

ಆರ್‌ ಆರ್‌ ನಗರ: ಕಾಂಗ್ರೆಸ್‌ಗೆ ಕಾರ್ಯಕರ್ತರ ಕೊರತೆಯೇ ಸವಾಲು!

ಅದೇ ರೀತಿ ಮದ್ಯ ಮಾರಾಟಕ್ಕೂ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ. ಆರ್.ಆರ್‌ ನಗರ ವ್ಯಾಪ್ತಿಯಲ್ಲಿ ಮದ್ಯ ಅಥವಾ ಯಾವುದೇ ಮಾದಕವಸ್ತುಗಳ ಮಾರಾಟ, ಬಳಕೆ, ಸಂಗ್ರಹಣೆಯನ್ನು ನಿಷೇಧಿಸಲಾಗಿದೆ. ನವೆಂಬರ್ 1 ರಂದು ಸಂಜೆ 5 ಗಂಟೆಯಿಂದ ನವೆಂಬರ್ 3 ಮಧ್ಯರಾತ್ರಿಯವರೆಗೆ ಮದ್ಯ ಮಾರಾಟವನ್ನುನಿಷೇಧಿಸಲಾಗಿದೆ.

ಡಿಕೆಶಿ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಎಸ್‌ ಟಿ ಸೋಮಶೇಖರ್‌ ವಾಗ್ದಾಳಿ

ಇನ್ನು ಮತ ಎಣಿಕೆಯ ದಿನವಾದ ನವೆಂಬರ್‌ 10 ರಂದು ಮಧ್ಯರಾತ್ರಿ 12 ಗಂಟೆಯ ವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆರ್ ಆರ್‌ ನಗರದಲ್ಲಿ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ನಡೆದ ಸಂಘರ್ಷದ ಹಿನ್ನೆಲೆಯಲ್ಲಿ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅರೆ ಸೇನಾ ತುಕಡಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ನವೆಂಬರ್ 3 ರಂದು ಆರ್‌ ಆರ್‌ ನಗರ ವಿಧಾನಸಭಾ ಉಪಚುನಾವಣೆ ನಡೆಯಲಿದ್ದು ಕಾಂಗ್ರೆಸ್‌ನಿಂದ ಕುಸುಮಾ ಎಚ್‌, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್‌ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ