ಆ್ಯಪ್ನಗರ

ಅತ್ತಿಬೆಲೆ ಸೇಂಟ್‌ ಫಿಲೋಮಿನಾ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ

ಆನೇಕಲ್‌ ತಾಲೂಕು ಅತ್ತಿಬೆಲೆಯ ಸೇಂಟ್‌ ಫಿಲೋಮಿನಾ ಶಿಕ್ಷಣ ಸಂಸ್ಥೆಯಲ್ಲಿ 'ಪೋಷಕರ ಕ್ರೀಡಾಕೂಟ'ವನ್ನು ಆಯೋಜನೆ ಮಾಡಲಾಗಿತ್ತು. ಈ ಕ್ರೀಡಾಕೂಟದಲ್ಲಿ ಎಲ್ಲಾ ಪೋಷಕರು ಭಾಗವಹಿಸಿದ್ದರು.

Vijaya Karnataka 10 Dec 2018, 5:00 am
ಬೆಂಗಳೂರು: ಆನೇಕಲ್‌ ತಾಲೂಕು ಅತ್ತಿಬೆಲೆಯ ಸೇಂಟ್‌ ಫಿಲೋಮಿನಾ ಶಿಕ್ಷಣ ಸಂಸ್ಥೆಯಲ್ಲಿ 'ಪೋಷಕರ ಕ್ರೀಡಾಕೂಟ'ವನ್ನು ಆಯೋಜನೆ ಮಾಡಲಾಗಿತ್ತು. ಈ ಕ್ರೀಡಾಕೂಟದಲ್ಲಿ ಎಲ್ಲಾ ಪೋಷಕರು ಭಾಗವಹಿಸಿದ್ದರು.
Vijaya Karnataka Web sports meet to parents
ಅತ್ತಿಬೆಲೆ ಸೇಂಟ್‌ ಫಿಲೋಮಿನಾ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ


ಓಟದ ಸ್ಪರ್ಧೆ, ಗೋಣಿಚೀಲ ಓಟ, ವಾಟರ್‌ ಬಲೂನ್‌ ಕ್ಯಾಚಿಂಗ್‌, ಮೈಂಡ್‌ ಗೇಮ್ಸ್‌ ಸೇರಿದಂತೆ ಇತರೆ ಸ್ಪರ್ಧೆಗಳನ್ನು ಏರ್ಪಡಸಲಾಗಿತ್ತು. ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾದ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿತ್ತು. ಪೋಷಕರೊಂದಿಗೆ ವಿದ್ಯಾರ್ಥಿಗಳು ಸಹ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ನೀಡಿ ಸತ್ಕರಿಸಲಾಯಿತು.

ಕ್ರೀಡಾಕೂಟವನ್ನು ಸಂಸ್ಥೆಯ ಪ್ರಾಂಶುಪಾಲರಾದ ಜಿ.ಎನ್‌.ಸುರೇಶ್‌ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ''ಕ್ರೀಡೆಗಳು ಉತ್ತಮ ಆರೋಗ್ಯಕ್ಕೆ ಸಹಕಾರಿ. ಆದರೆ, ಒತ್ತಡದ ಬದುಕಿನಿಂದಾಗಿ ಬಹುತೇಕ ಪೋಷಕರು ಕ್ರೀಡಾ ಚುಟುವಟಿಕೆಗಳಿಂದ ದೂರು ಉಳಿದಿದ್ದಾರೆ. ಹಾಗಾಗಿ, ಶಾಲೆಯಲ್ಲಿ ತಮ್ಮ ಮಕ್ಕಳೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಹೊಸ ಉಲ್ಲಾಸ ಪಡೆಯಬಹುದಾಗಿದೆ'' ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ವಿಜಯಕುಮಾರ್‌, ಸಂಯೋಜಕಿ ಭಾರತಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ