ಆ್ಯಪ್ನಗರ

ಗುರು ರಾಘವೇಂದ್ರ ಬ್ಯಾಂಕ್‌ನ ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣ ಸಿಐಡಿಗೆ ವರ್ಗ

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಮಾಜಿ ಸಿಇಒ ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಜು.6ರಂದು ಮಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು

Vijaya Karnataka Web 10 Jul 2020, 7:59 am
ಬೆಂಗಳೂರು: ಬಸವನಗುಡಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಮಾಜಿ ಸಿಇಒ ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.
Vijaya Karnataka Web Vasudeva Mayya


ಅವ್ಯವಹಾರದ ಪ್ರಕರಣವನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿತ್ತು. ಸೋಮವಾರ(ಜು.6) ರಾತ್ರಿ ವಾಸುದೇವ ಮಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೆ ಮುನ್ನ ಬರೆದಿರುವ 6 ಪುಟಗಳ ಮರಣ ಪತ್ರದಲ್ಲಿ ತನ್ನಿಂದ ಹಣ ಪಡೆದವರು ಮತ್ತು ಮೋಸ ಮಾಡಿದವರು ಯಾರೆಂದು ಹೆಸರು ಉಲ್ಲೇಖಿಸಿದ್ದಾರೆ.

ಅವ್ಯವಹಾರದ ತನಿಖೆಯನ್ನು ಸಿಐಡಿ ನಡೆಸುತ್ತಿರುವ ಕಾರಣ, ಆತ್ಮಹತ್ಯೆ ಪ್ರಕರಣವನ್ನು ಕೂಡ ಸಿಐಡಿಗೆ ವಹಿಸಲು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್‌ ಸೆಪಟ್‌ ಅವರು ಪೊಲೀಸ್‌ ಆಯುಕ್ತರ ಮೂಲಕ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ.

ಸಿಐಡಿಯಲ್ಲಿ ಹಲವು ಅಧಿಕಾರಿ ಮತ್ತು ಸಿಬ್ಬಂದಿಗೆ ಸೋಂಕು ತಗಲಿದೆ. ಕಚೇರಿಯನ್ನು ಸೀಲ್‌ಡೌನ್‌ ಮಾಡಿರುವ ಕಾರಣ ಪ್ರಕರಣದ ತನಿಖೆ ವಿಳಂಬವಾಗಿ ನಡೆಯುವ ಸಾಧ್ಯತೆ ಇದೆ.

ಆಡಳಿತ ಮಂಡಳಿಯೇ ತಂದೆ ಆತ್ಮಹತ್ಯೆಗೆ ಕಾರಣ, ವಾಸುದೇವ ಮಯ್ಯ ಸಾವು ಪ್ರಕರಣಕ್ಕೆ ಟ್ವಿಸ್ಟ್

ಇನ್ನು "ನನ್ನ ತಂದೆಯ ಅಮಾಯಕತೆ ಹಾಗೂ ವ್ಯವಹಾರಿಕ ಪರಿಜ್ಞಾನ ಇಲ್ಲದ ಮನಸ್ಥಿತಿಯನ್ನೇ ದುರ್ಬಳಕೆ ಮಾಡಿಕೊಂಡು ಸಾವಿರಾರು ಕೋಟಿ ರೂ. ಅಕ್ರಮ ನಡೆಯಲು ಬ್ಯಾಂಕ್‌ನ ಆಡಳಿತ ಮಂಡಳಿಯ 11 ಮಂದಿ ಕಾರಣ'' ಎಂದು ಮಯ್ಯ ಅವರ ಪುತ್ರಿ ರಶ್ಮಿ ಸುಬ್ರಮಣ್ಯಪುರ ಪೊಲೀಸ್‌ ಠಾಣೆಗೆ ಈಗಾಗಲೇ ದೂರು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ