ಆ್ಯಪ್ನಗರ

ಮೇಕೆದಾಟು ಯೋಜನೆ ತಕ್ಷಣ ಆರಂಭಿಸಿ: ಡಿಕೆ ಶಿವಕುಮಾರ್

ತಮಿಳುನಾಡಿನ ಬಿಜೆಪಿ, ಡಿಎಂಕೆ ಅಥವಾ ಬೇರೆ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ. ನಮ್ಮ ಮುಖ್ಯಮಂತ್ರಿಗಳು ನೀರಾವರಿ ಸಚಿವರಾಗಿದ್ದವರು. ಅವರಿಗೆ ಈ ಯೋಜನೆ ಬಗ್ಗೆ ಅರಿವಿದೆ. ಅವರು ಯೋಜನೆ ಆರಂಭಿಸುತ್ತಾರೆ

Vijaya Karnataka Web 31 Jul 2021, 8:31 pm
ಬೆಂಗಳೂರು: ಮೇಕೆದಾಟು ಅಣೆಕಟ್ಟೆ ನಮ್ಮ ಪಾಲಿನ ನೀರು ಬಳಸಿಕೊಳ್ಳುವ ಯೋಜನೆ. ಈ ಯೋಜನೆ ಮಾಡಬಾರದು ಎಂದು ಯಾವ ಆದೇಶವೂ ಇಲ್ಲ. ಹೀಗಾಗಿ ಸರಕಾರ ಯೋಜನೆ ಆರಂಭಿಸಲಿ. ನಾವು ಸಂಪೂರ್ಣ ಸಹಕಾರ ನೀಡುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
Vijaya Karnataka Web ಡಿಕೆ ಶಿವಕುಮಾರ್‌
ಡಿಕೆ ಶಿವಕುಮಾರ್‌


ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಸಂಜೆ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು:

'ಮೇಕೆದಾಟು ಯೋಜನೆಯಿಂದ ಒಂದು ಎಕರೆಯೂ ನೀರಾವರಿ ಆಗುವುದಿಲ್ಲ. ವಿದ್ಯುತ್ ಉತ್ಪಾದನೆ ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ತಮಿಳುನಾಡಿನ ಬಿಜೆಪಿ, ಡಿಎಂಕೆ ಅಥವಾ ಬೇರೆ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ. ನಮ್ಮ ಮುಖ್ಯಮಂತ್ರಿಗಳು ನೀರಾವರಿ ಸಚಿವರಾಗಿದ್ದವರು. ಅವರಿಗೆ ಈ ಯೋಜನೆ ಬಗ್ಗೆ ಅರಿವಿದೆ. ಅವರು ಆದಷ್ಟು ಬೇಗನೆ ಯೋಜನೆ ಆರಂಭಿಸುತ್ತಾರೆ ಎಂದು ಭಾವಿಸುತ್ತೇನೆ.

ಪರಿಸರ ಇಲಾಖೆ ಅನುಮತಿ ಸಿಕ್ಕಿರುವಾಗ ನಮ್ಮ ಸಿಎಂ ಅವರು ಕೇಂದ್ರ ಸರಕಾರದ ಮೇಲೆ ಒತ್ತಡ ತಂದು, ಇತರೆ ಇಲಾಖೆಗಳ ಅನುಮತಿ ಪಡೆದು, ಆದಷ್ಟು ಬೇಗ ಗುದ್ದಲಿ ಪೂಜೆ ಮಾಡಿ, ಕೆಲಸ ಆರಂಭಿಸಲಿ. ಬೇರೆಯವರ ಮೇಲೆ ದೂರುತ್ತಾ ಕೂರುವುದಲ್ಲ. ಕೆಲಸ ಆರಂಭಿಸಬೇಡಿ ಎಂದು ಯಾವುದಾದರೂ ಆದೇಶ ಇದೆಯಾ? ನೀವು ಕೆಲಸ ಆರಂಭಿಸಿ. ನಿಮಗೆ ಬೇಕಾದ ಎಲ್ಲ ರೀತಿಯ ಸಹಕಾರ ನಾವು ನೀಡುತ್ತೇವೆ ಎಂದು ಹೇಳುತ್ತಿದ್ದೇವೆ. ಅವರು ಯಾಕೆ ಗಟ್ಟಿತನ ತೋರುತ್ತಿಲ್ಲವೋ ಗೊತ್ತಿಲ್ಲ.

ಅವರು ಸಂಪುಟ ವಿಸ್ತರಣೆ ಬಗ್ಗೆ ಏನಾದರೂ ಮಾಡಿಕೊಳ್ಳಲಿ, ಯೋಜನೆ ಬಗ್ಗೆ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ