ಆ್ಯಪ್ನಗರ

12ನೇ ಮಹಡಿಯಿಂದ ಹಾರಿ ಟೆಕ್ಕಿ ಆತ್ಮಹತ್ಯೆ

ಸಾಫ್ಟ್‌ವೇರ್‌ ಎಂಜಿನಿಯರ್‌ ಒಬ್ಬರು ತಾವು ಕೆಲಸ ಮಾಡುವ ಕಂಪನಿ ಕಟ್ಟಡದ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಐಟಿಪಿಎಲ್‌ನಲ್ಲಿ ನಡೆದಿದೆ.

Vijaya Karnataka 12 Jun 2018, 5:00 am
ಬೆಂಗಳೂರು: ಸಾಫ್ಟ್‌ವೇರ್‌ ಎಂಜಿನಿಯರ್‌ ಒಬ್ಬರು ತಾವು ಕೆಲಸ ಮಾಡುವ ಕಂಪನಿ ಕಟ್ಟಡದ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಐಟಿಪಿಎಲ್‌ನಲ್ಲಿ ನಡೆದಿದೆ.
Vijaya Karnataka Web techie suicide by jumping from 12th floor
12ನೇ ಮಹಡಿಯಿಂದ ಹಾರಿ ಟೆಕ್ಕಿ ಆತ್ಮಹತ್ಯೆ


ಮಧ್ಯಪ್ರದೇಶ ಮೂಲದ ಭವೇಶ್‌ ಜೈಪಾಲ್‌ ಆತ್ಮಹತ್ಯೆ ಮಾಡಿಕೊಂಡವರು. ನ್ಯೂ ಸಿಗ್ಮಾ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು ಸೋಮವಾರ ಸಂಜೆ ಕೆಲಸದ ಅವಧಿ ಮುಗಿಯುವ ವೇಳೆಗೆ ಕಟ್ಟಡದ 12ನೇ ಮಹಡಿಗೆ ಲಿಫ್ಟ್‌ನಲ್ಲಿ ಹೋಗಿ ಅಲ್ಲಿಂದಲೇ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಹದ್ಯೋಗಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೇಲಿನಿಂದ ಬಿದ್ದ ಶಬ್ದ ಕೇಳಿದ ತಕ್ಷಣ ಕಾವಲು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು. ಅಷ್ಟು ಹೊತ್ತಿಗೆ ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದು, ತಲೆಯಿಂದ ರಕ್ತಸ್ರಾವ ಆಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 23ವರ್ಷ ವಯಸ್ಸಿನ ಜೈಸ್ವಾಲ್‌ ಇನ್ನೂ ಅವಿವಾಹಿತರಾಗಿದ್ದರು. ವೈಯುಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಹೋದ್ಯೋಗಿಗಳ ಜತೆ ಏನನ್ನೂ ಹೇಳಿಕೊಂಡಿಲ್ಲ. ಯಾರಿಗಾದರೂ ಸಂದೇಶ ಅಥವಾ ಇ-ಮೇಲ್‌ ಕಳುಹಿಸಿದ್ದಾರಾ ಎನ್ನುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಜತೆಯಲ್ಲಿ ಕೆಲಸ ಮಾಡುವ ಹಲವರಿಂದ ಮತ್ತು ಕಂಪನಿ ಎಚ್‌ಆರ್‌ ಕಡೆಯಿಂದ ಒಂದಷ್ಟು ಮಾಹಿತಿ ಸಂಗ್ರಹಿಸಿದ್ದೇವೆ. ಕಳೆದ ಒಂದೂವರೆ ವರ್ಷಗಳಿಂದ ಇವರು ಬೆಂಗಳೂರಿನಲ್ಲೇ ಕೆಲಸ ಮಾಡಿಕೊಂಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವೈಟ್‌ಫೀಲ್ಡ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ