ಆ್ಯಪ್ನಗರ

ರೋಷನ್ ಬೇಗ್ ನಿವಾಸ, ಶಿವಾಜಿನಗರ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್

ಎಸ್‍‌ಐಟಿ ವಶದಲ್ಲಿರುವ ರೋಷನ್ ಬೇಗ್ ನಿವಾಸಕ್ಕೆ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಒದಗಿಸಿದ್ದಾರೆ.

Vijaya Karnataka Web 16 Jul 2019, 9:36 am
ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಕಾಂಗ್ರೆಸ್‌ನಿಂದ ಸಸ್ಪೆಂಡ್ ಆಗಿರುವ ಶಾಸಕ ರೋಷನ್‌ ಬೇಗ್‌ ಅವರನ್ನು ವಿಶೇಷ ತನಿಖಾ ದಳ ಅಧಿಕಾರಿಗಳು ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಪ್ರೆಜರ್ ಟೌನ್‌ನಲ್ಲಿರುವ ಅವರ ನಿವಾಸ ಹಾಗೂ ಶಿವಾಜಿನಗರ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Vijaya Karnataka Web sit


ಶಾಸಕರ ಬಂಧನದಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಜಾಗೃತ ಕ್ರಮವಾಗಿ ಪೊಲೀಸ್ ಭದ್ರತೆ ಕೈಗೊಂಡಿದ್ದಾರೆ.

ಬೇಗ್ ಬಂಧನ ಖಂಡಿಸಿ ಅವರ ಕಾರ್ಯಕರ್ತರು ಪ್ರತಿಭಟನೆ, ಗಲಾಟೆ ಮಾಡುವ ಸಾಧ್ಯತೆ ಇದೆ ಎಂದು ಪೊಲೀಸರು ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ.

ಐಎಂಎ ಜ್ಯುವೆಲ್ಸ್‌ ವಂಚನೆ ಪ್ರಕರಣ: ರೋಷನ್‌ ಬೇಗ್‌ ಬಂಧನ

ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣದಲ್ಲಿ ಮಾಲೀಕ ಮೊಹಮದ್ ಮನ್ಸೂರ್ ಅಲಿ ಖಾನ್‌ ಈ ಹಿಂದೆ ವೀಡಿಯೋ ಬಿಡುಗಡೆ ಮಾಡಿ, ರೋಷನ್‌ ಬೇಗ್‌ಗೆ ಐದು ಕೋಟಿ ರೂಪಾಯಿ ನೀಡಿದ್ದೇ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಆಗಮಿಸಲು ರೋಷನ್‌ ಬೇಗ್‌ಗೆ ಹಲವು ಬಾರಿ ಸಮನ್ಸ್‌ ಜಾರಿ ಮಾಡಿದ್ದರೂ ಗೈರು ಹಾಜರಾಗಿದ್ದರು.

ಸೋಮವಾರ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲು ಮುಂದಾದ ಸಂದರ್ಭದಲ್ಲಿ ಎಸ್‌ಐಟಿ ಅಧಿಕಾರಿ ಗಿರೀಶ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ರೋಷನ್‌ ಬೇಗ್‌ ಅವರನ್ನು ವಶಕ್ಕೆ ಪಡೆದುಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ