ಆ್ಯಪ್ನಗರ

ಭಗ್ನಪ್ರೇಮಿಯಿಂದ ಅಸಭ್ಯ ವರ್ತನೆ: ಆರೋಪಿ ಸೆರೆ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಎದುರು ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ಜಾನ್‌ ...

Vijaya Karnataka 5 Apr 2018, 5:00 am
ಬೆಂಗಳೂರು: ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಎದುರು ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ಜಾನ್‌ (28) ಎಂಬಾತನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web vulgar conduct from bhagmapriya capture arrested
ಭಗ್ನಪ್ರೇಮಿಯಿಂದ ಅಸಭ್ಯ ವರ್ತನೆ: ಆರೋಪಿ ಸೆರೆ


ದೂರು ನೀಡಿದ 22 ವರ್ಷದ ಸಂತ್ರಸ್ತ ಯುವತಿಯನ್ನು ಆರೋಪಿ ಜಾನ್‌ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ, ಅದಕ್ಕೆ ಯುವತಿ ಸಮ್ಮತಿಯಿರಲಿಲ್ಲ.

ಮಾ.31ರಂದು ಬೆಳಗ್ಗೆ 9.30ರ ಸುಮಾರಿಗೆ ಯುವತಿ ಮನೆ ಬಳಿ ಬಂದ ಆರೋಪಿ ಜಾನ್‌, ನೀನು ನನ್ನನ್ನು ಪ್ರೀತಿಸಬೇಕು. ಇಲ್ಲದಿದ್ದರೆ ನಿನಗೆ ಒಂದು ಗತಿ ಕಾಣಿಸುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ್ದಾನೆ. ಈ ವೇಳೆ ಯುವತಿಯ ತಾಯಿ ಬಂದು, ಅವಳಿಗೆ ಇಷ್ಟವಿಲ್ಲದಿದ್ದರೂ ಏಕೆ ಬಲವಂತ ಮಾಡುತ್ತಿಯಾ ? ಸುಮ್ಮನೇ ಇಲ್ಲಿಂದ ಹೊರಟು ಹೋಗು ಎಂದು ಹೇಳಿದ್ದಾರೆ. ಆಗ ಜಗಳ ತೆಗೆದ ಆರೋಪಿ, ನೀನು ಯಾರು ನನಗೆ ಬುದ್ದಿ ಹೇಳಲು ಎಂದು ಜಗಳ ಮಾಡಿ ಪ್ಯಾಂಟ್‌ನ ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೇ, ಯುವತಿ ಹಾಗೂ ಆಕೆಯ ತಾಯಿಯನ್ನು ಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿ ತಾಯಿಯ ಕೈಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ಈ ವೇಳೆ ತಾಯಿಯ ನೆರವಿಗೆ ಬಂದ ಯವತಿಗೂ, ನೀನು ಬದುಕಿದ್ದರೆ ತಾನೇ ಬೇರೆಯವರನ್ನು ಪ್ರೀತಿಸುತ್ತೀಯ ಎಂದು ಹೇಳಿ ಆಕೆಗೂ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಾಣಸವಾಡಿ ಪೊಲೀಸರು, ಆರೋಪಿ ಜಾನ್‌ನನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಿದ್ದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ