ಆ್ಯಪ್ನಗರ

ಮಹಿಳೆಯರ ನೋವಿಗೆ ಸ್ಪಂದಿಸಲು ರಾಜಕೀಯದಲ್ಲಿ ಮಹಿಳೆಯರಿರಬೇಕು: ಡಿಕೆಶಿ

ಭವಿಷ್ಯದ ರಾಜಕೀಯದಲ್ಲಿ ಪ್ರಜ್ಞಾವಂತ ಹೆಣ್ಣು ಮಕ್ಕಳಿರಬೇಕಿದೆ ಎಂದ ಡಿಕೆಶಿ, ಹೀಗಾಗಿಯೇ, ಬುದ್ಧಿವಂತ, ಪ್ರಜ್ಞಾವಂತ, ಸ್ವಾಭಿಮಾನಿ ಹೆಣ್ಣನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಕ್ಷೇತ್ರದ ಜನರು, ಮಹಿಳೆಯರು ಪಕ್ಷಬೇಧ, ಜಾತಿ-ಧರ್ಮವನ್ನು ಬದಿಗೊತ್ತಿ ಕುಸುಮಾ ಅವರನ್ನು ಗೆಲ್ಲಿಸುವ ನಂಬಿಕೆ ಇದೆ ಎಂದರು.

Vijaya Karnataka Web 27 Oct 2020, 6:32 am
ಬೆಂಗಳೂರು: ಕಾಂಗ್ರೆಸ್‌ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಬೊಮ್ಮನಹಳ್ಳಿ, ರಾಜಾಜಿನಗರ ಮತ್ತು ಜಯನಗರ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿತ್ತು. ಬಿಜೆಪಿಯವರು 28 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡಿರಲಿಲ್ಲ. ಹೆಣ್ಣು ಕುಟುಂಬದ ಕಣ್ಣು ಎಂಬುದರಲ್ಲಿ ನಂಬಿಕೆ ಹೊಂದಿರುವ ಪಕ್ಷ ಕಾಂಗ್ರೆಸ್‌ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
Vijaya Karnataka Web DKS


ನೀವು ಮಾಡುತ್ತಿರುವುದು ಜಾತಿ ರಾಜಕಾರಣವಲ್ಲವೇ..? ಬಿಜೆಪಿಗೆ ಡಿಕೆ ಶಿವಕುಮಾರ್‌ ಪ್ರಶ್ನೆ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ವಾಸವಿರುವ ಕೋಲಾರ, ಚಿಕ್ಕಬಳ್ಳಾಪುರ ನಿವಾಸಿಗಳೊಂದಿಗೆ ಸೋಮವಾರ ಸಂಜೆ ಸಭೆ ನಡೆಸಿ, ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ನಗರದಲ್ಲಿ ಮಹಿಳೆಯರ ಪ್ರಮಾಣ ಶೇ 52ರಷ್ಟಿದೆ. ಇವರ ನೋವಿಗೆ ಸ್ಪಂದಿಸಲು ರಾಜಕೀಯದಲ್ಲಿ ಮಹಿಳೆಯರಿರಬೇಕು ಎಂದರು.

ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ…!

ಇನ್ನು ಭವಿಷ್ಯದ ರಾಜಕೀಯದಲ್ಲಿ ಪ್ರಜ್ಞಾವಂತ ಹೆಣ್ಣು ಮಕ್ಕಳಿರಬೇಕಿದೆ ಎಂದ ಡಿಕೆಶಿ, ಹೀಗಾಗಿಯೇ, ಬುದ್ಧಿವಂತ, ಪ್ರಜ್ಞಾವಂತ, ಸ್ವಾಭಿಮಾನಿ ಹೆಣ್ಣನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಕ್ಷೇತ್ರದ ಜನರು, ಮಹಿಳೆಯರು ಪಕ್ಷಬೇಧ, ಜಾತಿ-ಧರ್ಮವನ್ನು ಬದಿಗೊತ್ತಿ ಕುಸುಮಾ ಅವರನ್ನು ಗೆಲ್ಲಿಸುವ ನಂಬಿಕೆ ಇದೆ ಎಂದರು.

ಮುನಿರತ್ನ ಕೇಬಲ್‌ ಟೆಲಿವಿಷನ್‌ ಸೇವೆ ಸ್ಥಗಿತಗೊಳಿಸಿ - ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಇದೇ ವೇಳೆ ಆರ್ಥಿಕ ವ್ಯವಸ್ಥೆ, ಉದ್ಯೋಗ ಸೃಷ್ಟಿ, ಮಹಿಳೆಯರ ರಕ್ಷಣೆ, ರೈತರ ಅಭಿವೃದ್ಧಿಗೆ ಬಿಜೆಪಿ ಸರಕಾರ ಏನೇನೂ ಮಾಡಿಲ್ಲ ಎಂದು ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ