ಆ್ಯಪ್ನಗರ

ಶೀಘ್ರ ಪರಿಹಾರಕ್ಕ್ಕೆ ಒತ್ತಾಯ

ಜಿಲ್ಲಾಧಿಕಾರಿ ದಿ. ಡಿ.ಕೆ. ರವಿ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಗಳಿಂದ ನರಳುತ್ತಿದ್ದರೂ ಅವರಿಗೆ ನೀಡಬೇಕಿದ್ದ ಪರಿಹಾರ ಹಣ ವಿತರಣೆ ಮಾಡದೇ, ಅವರ ಸಾವಿನ ಕುರಿತು ಸೂಕ್ತ ತನಿಖೆ ಮಾಡದೇ ನಿರ್ಲಕ್ಷ್ಯ ತಾಳಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಕರ್ನಾ ಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್ ಶೆಟ್ಟಿ ಬಣದ ತಾಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಯಿತು.

ವಿಕ ಸುದ್ದಿಲೋಕ 15 Mar 2016, 3:42 pm
ದೊಡ್ಡಬಳ್ಳಾಪುರ: ಜಿಲ್ಲಾಧಿಕಾರಿ ದಿ. ಡಿ.ಕೆ. ರವಿ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಗಳಿಂದ ನರಳುತ್ತಿದ್ದರೂ ಅವರಿಗೆ ನೀಡಬೇಕಿದ್ದ ಪರಿಹಾರ ಹಣ ವಿತರಣೆ ಮಾಡದೇ, ಅವರ ಸಾವಿನ ಕುರಿತು ಸೂಕ್ತ ತನಿಖೆ ಮಾಡದೇ ನಿರ್ಲಕ್ಷ್ಯ ತಾಳಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಕರ್ನಾ ಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್ ಶೆಟ್ಟಿ ಬಣದ ತಾಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಯಿತು.
Vijaya Karnataka Web
ಶೀಘ್ರ ಪರಿಹಾರಕ್ಕ್ಕೆ ಒತ್ತಾಯ


ನಗರದ ಹಳೇ ಬಸ್‌ನಿಲ್ದಾಣದ ಸಿದ್ದಲಿಂಗಯ್ಯ ವೃತ್ತದಿಂದ ಘೋಷಣೆ ಕೂಗುತ್ತ ಮೆರವಣಿಗೆ ಹೊರಟ ಕರವೇ ಕಾರ್ಯಕರ್ತರು, ತಾಲೂಕು ಕಚೇರಿ ಮುಂದೆ ಪ್ರತಿಭಟನೆ ಕೈಗೊಂಡರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲೂಕು ಕಾರ್ಯಾಧ್ಯಕ್ಷ ರವಿ ಮಾವಿನಕುಂಟೆ, ಶೀಘ್ರದಲ್ಲಿ ಡಿ.ಕೆ. ರವಿ ಕುಟುಂಬಕ್ಕೆ ಪರಿಹಾರ ನೀಡಬೇಕು ತಪ್ಪಿದಲ್ಲಿ ಕರವೇ ಯಿಂದ ಉಗ್ರ ಹೋರಾಟ ಮಾಡಲಾಗು ವುದು ಎಂದು ಎಚ್ಚರಿಸಿದರು.

ಕರವೇ ನಗರ ಪ್ರಧಾನ ಕಾರ್ಯದರ್ಶಿ ಬಶೀರ್ ಮಾತನಾಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಕರವೇ ತಾಲೂಕು ಅಧ್ಯಕ್ಷ ರಾಜಘಟ್ಟ ರವಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹಮಾಮ್ ಪ್ರಕಾಶ್, ತಾಲೂಕು ಕಾರ್ಯದರ್ಶಿ ಜೋಗಿಹಳ್ಳಿ ಅಮ್ಮು, ನಗರ ಅಧ್ಯಕ್ಷ ಪುು. ಮಹೇಶ್, ಸಾಸಲು ಹೋಬಳಿ ಅಧ್ಯಕ್ಷ ಕದಿರೇಗೌಡ, ತೂಬಗೆರೆ ಹೋಬಳಿಯ ಮುನಿ ಆಂಜಿನಪ್ಪ, ಘಾಟಿ ಶಾಖೆಯ ತಿಮ್ಮರಾಜು ಇತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ