ಹೊಸಕೋಟೆ: ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸೆ. 2ರಂದು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಹೊಸಕೋಟೆ ನಾಗರೀಕ ಹಿತರಕ್ಷ ಣಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ ಎಂದು ತಾಲೂಕು ಸಿಐಟಿಯು ಅಧ್ಯಕ್ಷ ಹರೀಂದ್ರ ತಿಳಿಸಿದ್ದಾರೆ.
ಮುಷ್ಕರದ ಅಂಗವಾಗಿ ಪಟ್ಟಣದಲ್ಲಿ ಮೆರವವಣಿಗೆ ಹಮ್ಮಿಕೊಂಡಿದ್ದು, ಸ್ಥಳೀಯ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಪಟ್ಟಣದ ವ್ಯಾಪಾರಸ್ಥರು ಸ್ವಯಂ ಘೋಷಿತವಾಗಿ ಅಂಗಡಿಗಳನ್ನು ಮುಚ್ಚಿ ವಹಿವಾಟು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.