ಆ್ಯಪ್ನಗರ

ವಿದ್ಯಾರ್ಥಿ ಜೀವನ ಶ್ರೇಷ್ಠ

ದುಶ್ಚಟಗಳ ದಾಸರಾದ ವಿದ್ಯಾರ್ಥಿಗಳು ಭಯೋತ್ಪಾದನೆಯಂತಹ ದುಷ್ಕೃತ್ಯಗಳಲ್ಲಿ ಭಾಗಿಯಾಗಿ ತಮ್ಮ ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಕ.ಸಾ.ಪ. ತಾಲೂಕು ಅಧ್ಯಕ್ಷ ಸೂಲಿಬೆಲೆ ಎಂ.ಆರ್‌. ಉಮೇಶ್‌ ತಿಳಿಸಿದರು.

Vijaya Karnataka 1 Nov 2018, 3:08 pm
ತಾವರೆಕೆರೆ: ದುಶ್ಚಟಗಳ ದಾಸರಾದ ವಿದ್ಯಾರ್ಥಿಗಳು ಭಯೋತ್ಪಾದನೆಯಂತಹ ದುಷ್ಕೃತ್ಯಗಳಲ್ಲಿ ಭಾಗಿಯಾಗಿ ತಮ್ಮ ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಕ.ಸಾ.ಪ. ತಾಲೂಕು ಅಧ್ಯಕ್ಷ ಸೂಲಿಬೆಲೆ ಎಂ.ಆರ್‌. ಉಮೇಶ್‌ ತಿಳಿಸಿದರು.
Vijaya Karnataka Web
ವಿದ್ಯಾರ್ಥಿ ಜೀವನ ಶ್ರೇಷ್ಠ


ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಹರಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸಕೋಟೆ ತಾಲೂಕು ಕಸಾಪ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಕಂಠಪಾಠ ಸ್ಪರ್ಧೆ, ಕವಿ ಪರಿಚಯ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಭಯೋತ್ಪಾದನೆಯಂತಹ ಚಟುವಟಿಕೆಗಳಿಂದ ದೂರ ಉಳಿಯಬೇಕು. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಗೆ ಬಲಿಯಾಗದೇ, ಚೆನ್ನಾಗಿ ಓದಿ ನಾಡಿನ ಸತ್ಪ್ರಜೆಗಳಾಗಬೇಕು. ವಿದ್ಯಾರ್ಥಿಗಳು ಯಾವುದೇ ಕಷ್ಟಕ್ಕೆ ಹೆದರದೆ ಮುನ್ನುಗ್ಗಿದಾಗ ಮಾತ್ರ ಬದುಕಿನ ಉದ್ದೇಶ ಹಾಗೂ ಗುರಿ ಸಾಧಿಸಲು ಸಾಧ್ಯ. ಸತತ ಅಧ್ಯಯನ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ಉಜ್ವಲ ಭವಿಷ್ಯ ಹೊಂದಬಹುದು ಎಂದರು.

ವಿದ್ಯಾರ್ಥಿ ಜೀವನವು ಶ್ರೇಷ್ಠವಾಗಿದೆ. ಇಂತಹ ಸುದಿನಗಳಲ್ಲಿ ಭವಿಷ್ಯ ರೂಪಿಸುವ ಯೋಜನೆಗಳನ್ನು ವಿದ್ಯಾರ್ಥಿಗಳು ಹಾಕಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಒಳಿತಾಗುವುದು. ದೇಶದ ಅಭಿವೃದ್ಧಿ ಯುವಜನತೆಯ ಮೇಲೆ ಅವಲಂಬಿತವಾಗಿದೆ. ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ವಿದ್ಯಾರ್ಥಿಗಳು ಈಗಿನಿಂದಲೇ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಸಮಾಜದ ಋುಣ ತೀರಿಸಲು ಸದಾ ಮುಂದಾಗಬೇಕು. ವಿದ್ಯಾರ್ಥಿ ಜೀವನ ಅತಿ ಅಮೂಲ್ಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ‍್ಯಕ್ರಮದಲ್ಲಿ ಜಡಿಗೇನಹಳ್ಳಿ ಹೋಬಳಿ ಕಸಾಪ ಅಧ್ಯಕ್ಷ ರಾದ ಮಂಜುನಾಥ್‌, ಉಪಾಧ್ಯಕ್ಷ ಅಜಯ್‌, ಮುಖ್ಯ ಶಿಕ್ಷ ಕರಾದ ವೆಂಕಟೇಶ್‌, ಸಹ ಶಿಕ್ಷ ಕರಾದ ಪಂಕಜ ಹಾಗೂ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ